Advertisement

“ತೇಜಸ್ವಿ ಸಂತ್ರಸ್ತರ ಕಾಲು ಹಿಡಿದು ಕ್ಷಮೆ ಕೇಳಲಿ’

11:21 PM Sep 23, 2019 | Lakshmi GovindaRaju |

ವಿಜಯಪುರ: “ರಾಜ್ಯದ ನೆರೆ ಸಂತ್ರಸ್ತರ ಪರಿಹಾರ ವಿಷಯದಲ್ಲಿ ಹಗುರವಾಗಿ ಮಾತನಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಕ್ಷಣ ರಾಜ್ಯದ ನೆರೆ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಸಂತ್ರಸ್ತರ ಆಕ್ರೋಶ ಎದುರಿಸಬೇಕಾಗುತ್ತದೆ’ ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ ಎಚ್ಚರಿಸಿದರು.

Advertisement

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, “ಬೆಳಗಾವಿಯಲ್ಲಿ ಕುಳಿತು ಹೀಗೆ ಹೇಳುತ್ತಾರೆ, ದಿಲ್ಲಿಯಲ್ಲಿ ಹೇಗೆ ಹೇಳಿರಬೇಡ. ಇನ್ನು ಪ್ರಧಾನಿ ಮೋದಿ ಎದುರು ಏನು ಹೇಳಿರಬೇಕು? ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಅನುದಾನ ಬೇಕಿಲ್ಲ ಎಂದು ಹಗುರವಾಗಿ ಮಾತನಾಡಿದ್ದಾರೆ. ಸಂತ್ರಸ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅಗೌರವ ತೋರಿದ್ದಾರೆ.

ಕರ್ನಾಟಕದ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು. ಕರ್ನಾಟಕ ನೆರೆ ಹಾವಳಿಗೆ ತತ್ತರಿದರೂ ಸಂತ್ರಸ್ತರ ಸಂಕಷ್ಟ ಕೇಳಲು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡದಿರುವುದಕ್ಕೆ ತೇಜಸ್ವಿ ಸೂರ್ಯ ಅವರೇ ನೇರ ಕಾರಣ. ರಾಜ್ಯದ ಸ್ವಪಕ್ಷೀಯ ಸಂಸದ ನೆರೆ ಸಂತ್ರಸ್ತರ ಕುರಿತು ಪ್ರಧಾನಿ ಮೋದಿ ಅವರಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next