ಬೆಂಗಳೂರು: ಕೆಲ ದಿನಗಳಿಂದ ಹಾಕುತ್ತಿದ್ದ ಟ್ವೀಟ್ ಗಳ ಕಾರಣದಿಂದ ಮಾಜಿ ಸಚಿವ ಅನಂತ ಕುಮಾರ್ ಪತ್ನಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಪಕ್ಷ ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದೀಗ ಸ್ವತಃ ತೇಜಸ್ವಿನಿ ಅವರೇ ಇದಕ್ಕೆ ಬ್ರೇಕ್ ಹಾಕಿದ್ದು, ನಾನು ಬಿಜೆಪಿ ಜೊತೆಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಇವರು ರೈತೋದ್ಧಾರಕರಾ? ನಾಚಿಕೆಗೇಡು: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, “I am wedded to the party and ideology – no compromise” ಎಂದಿದ್ದಾರೆ.
ಈ ಹಿಂದೆ ಅವರು “2015ರ ಜೂನ್ 5ರಂದು ಲಾಲ್‌ಬಾಗ್ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ ಎಂದಿದ್ದರು. ಇದಕ್ಕೂ ಮೊದಲು ಅವರು“ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಟ್ವೀಟ್ ಮಾಡಿದ್ದರು. ಇದೆಲ್ಲಾ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು.