Advertisement
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದ ಅವರು ಎರಡೂ ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ತೇಜಸ್ವಿನಿ, ಕನಕಪುರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸೋಲಿಸಿ ಮುನ್ನೆಲೆಗೆ ಬಂದಿದ್ದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿ.ಎನ್. ಬಚ್ಚೇಗೌಡ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದೆಯೇ ಚುನಾವಣ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದ ಅವರು ಪಕ್ಷದ ಚಟುವಟಿಕೆಗಳಿಂದಲೂ ದೂರ ಉಳಿದಿದ್ದರು. ಮುಂದಿನ ದಾರಿ ಏನೆಂಬುದು ನಿಗೂಢವಾಗಿದೆ.
Related Articles
Advertisement
2008ರಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವನಾಗಿ, 2019ರಲ್ಲಿ ಸಂಸದನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಹಾಗೂ ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಎಂದೂ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮೊಲಿ ಅವರನ್ನು ಸೋಲಿಸಿ ಸಂಸದರಾಗಿದ್ದರು. ಆದರೆ ವಯಸ್ಸಿನ ಕಾರಣ ಹಾಗೂ ಬಿಜೆಪಿಗೆ ಎಂಟಿಬಿ ನಾಗರಾಜ್ ಸೇರಿಕೊಂಡ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇತ್ತ ಪಕ್ಷೇತರರಾಗಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಿದ್ದು, ಬಚ್ಚೇಗೌಡರೂ ಕಾಂಗ್ರೆಸ್ ಸೇರುತ್ತಾರಾ ಎಂಬ ಚರ್ಚೆಗಳಿವೆ. ಬಚ್ಚೇಗೌಡರ
ನಿವೃತ್ತಿ ಘೋಷಣೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ| ಕೆ. ಸುಧಾಕರ್, ಅಲೋಕ್ ವಿಶ್ವನಾಥ್, ಸುಮಲತಾ ಸಹಿತ ಹಲವರ ಹೆಸರು ಬಿಜೆಪಿಯಿಂದ ಕೇಳಿಬರುತ್ತಿದೆ.