Advertisement

ತೇಜಸ್ವಿ ಸೂರ್ಯ ಜತೆ ತೇಜಸ್ವಿನಿ ರೋಡ್‌ ಶೋ

06:04 PM Apr 16, 2019 | Team Udayavani |

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಮನೆಮನೆಗೆ ತೆರಳಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅವರು, ಸೋಮವಾರ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರೊಂದಿಗೆ ರೋಡ್‌ ಶೋ ನಡೆಸಿ ಮತ ಯಾಚಿಸಿದರು.

Advertisement

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರೊಂದಿಗೆ ತೆರೆದ ವಾಹನದಲ್ಲಿ ತೆರಳಿದ ತೇಜಸ್ವಿನಿ ಅವರು ಪ್ರಚಾರ ನಡೆಸಿದರು.

ಹೊಸಕೆರೆಹಳ್ಳಿ, ನಾರಾಯಣಪ್ಪ ಬಡಾವಣೆ, ಕೆರೆ ಕೋಡಿ, ಹೊಸಕೆರೆಹಳ್ಳಿ ಮುಖ್ಯರಸ್ತೆ, ಈಶ್ವರಿನಗರ, ಇಟ್ಟಮಡು ಭಾಗದಲ್ಲಿ ರ್ಯಾಲಿ ನಡೆಸಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಇದಕ್ಕೂ ಮೊದಲು ತೇಜಸ್ವಿ ಸೂರ್ಯ ಬೆಂಗಳೂರು ಆಟೋ ಚಾಲಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next