Advertisement

ಲೋಕಾಯುಕ್ತರ ಕೊಲೆ ಯತ್ನ: ತೇಜರಾಜ್ ಶರ್ಮ 5 ದಿನ ಪೊಲೀಸ್ ವಶಕ್ಕೆ

09:58 AM Mar 08, 2018 | Harsha Rao |

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತಕ್ಕೆ ಸಂಬಂಧಿಸಿ ಆರೋಪಿ ತೇಜರಾಜ್ ಶರ್ಮನನ್ನು 5 ದಿನಗಳ ಕಾಲ ವಿಚಾರಣೆಗಾಗಿ ಪೋಲೀಸರ ವಶಕ್ಕೆ ನೀಡಲಾಗಿದೆ.

Advertisement

ಆರೋಪಿ ತೇಜರಾಜ್ ನನ್ನು ತಡರಾತ್ರಿ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು ಹೆಚ್ಚಿನ ವಿಚಾರಣೆಗಾಗಿ ಪೋಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ : ನಿನ್ನೆ ನಡೆದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ನಡೆದ ಚಾಕು ಇರಿತ ಘಟನೆಗೆ ಸಂಬಂಧಿಸಿ ಲೋಕಾಯುಕ್ತ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಗೃಹಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಲೋಕಾಯುಕ್ತ ಕಚೇರಿಯ ಮೆಟಲ್ ಡಿಟೆಕ್ಟರ್ ಕೆಟ್ಟಿತ್ತು ಆದರೆ ಈಗ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next