Advertisement

Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

12:29 PM May 22, 2024 | Team Udayavani |

ತೆಲಂಗಾಣ: ಹೈದರಾಬಾದ್‌(Hyderabad) ನ ಎಸಿಪಿ ಮನೆಯಲ್ಲಿ ಚಿನ್ನ, ಬೆಳ್ಳಿ ಸೇರಿದಂತೆ 3.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳದ(Anti Corruption bureau) ಅಧಿಕಾರಿಗಳು ಪತ್ತೆ ಹಚ್ಚಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:Mysore: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

ದೂರಿನ ಆಧಾರದ ಮೇಲೆ ಸೆಂಟ್ರಲ್‌ ಕ್ರೈಮ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಸಿಸ್ಟೆಂಟ್‌ ಕಮಿಷನರ್‌ ಆಫ್‌ ಪೊಲೀಸ್‌ ಅವರ(ACP house) ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿರುವುದಾಗಿ ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸಿಪಿ ನಿವಾಸ, ಸಂಬಂಧಿಕರು ಸೇರಿದಂತೆ 11 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ನಗದು, ಚಿನ್ನಾಭರಣ ಸೇರಿದಂತೆ 3.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿರುವ ದಾಖಲೆ ಪತ್ರ ಪತ್ತೆಯಾಗಿದೆ.

ಪ್ರಕರಣದ ಬಗ್ಗೆ ದೂರು ದಾಖಲಾಗಿದ್ದು, ಅಸಿಸ್ಟೆಂಟ್‌ ಕಮಿಷನರ್‌ ಆಫ್‌ ಪೊಲೀಸ್‌ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next