Advertisement

Hyderabad; ಆಸ್ಪತ್ರೆಗೆ ಭೇಟಿ ನೀಡಿ ಕೆಸಿಆರ್‌ ಯೋಗಕ್ಷೇಮ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ

03:01 PM Dec 10, 2023 | Team Udayavani |

ಹೈದರಾಬಾದ್‌: ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೈದರಾಬಾದ್‌ನ ಯಶೋದಾ ಆಸ್ಪತ್ರೆಯಲ್ಲಿ ಬಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

Advertisement

ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ವಿಶ್ರಾಂತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಕಲ್ವಕುಂಟ್ಲ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದೆ ಎಂದು ರೆಡ್ಡಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವೆ ಡಿ. ಅನಸೂಯಾ ಸೀತಕ್ಕ ಮತ್ತು ಮಾಜಿ ಸಚಿವ ಶಬ್ಬೀರ್ ಅಲಿ ಜತೆಗಿದ್ದರು. ಸಿರ್ಸಿಲ್ಲಾ ಶಾಸಕ , ಕೆಸಿಆರ್ ಅವರ ಪುತ್ರ ಕೆ.ಟಿ. ರಾಮರಾವ್ ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದರು.

ಆಸ್ಪತ್ರೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ರೆಡ್ಡಿ, ಕೆಸಿಆರ್ ಅವರು ಚೇತರಿಸಿಕೊಳ್ಳುತ್ತಿದ್ದು, ಮಾಜಿ ಸಿಎಂ ಅವರ ಆರೋಗ್ಯದ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ರಾವ್ ಅವರು ವಿಧಾನಸಭೆಗೆ ಬಂದು ತಮ್ಮ ಅಮೂಲ್ಯ ಸಲಹೆಗಳನ್ನು ಸರಕಾರಕ್ಕೆ ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next