ಹೈದರಾಬಾದ್: ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ಮಾರ್ಗಸೂಚಿ ಮತ್ತು ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಡಿಜಿಪಿ, ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ:ಕಪ್ಪು ಶಿಲೀಂಧ್ರದಂತ ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ?ಎಚ್ ಡಿಕೆ ಪ್ರಶ್ನೆ
ಭಾರೀ ಆದಾಯ ನಷ್ಟವಾಗುತ್ತಿದ್ದರೂ ಕೂಡಾ ಒಟ್ಟಾರೆಯಾಗಿ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ತೆಲಂಗಾಣದಲ್ಲಿ ಬೇಸಿಗೆ ತೀವ್ರತೆ ಅಧಿಕವಾಗಿದ್ದು, ಮುಂದಿನ ವಾರ ಅಥವಾ 10 ದಿನಗಳ ಕಾಲ ಭತ್ತ ಖರೀದಿ ಕಾರ್ಯಕ್ರಮವನ್ನು ಚುರುಕುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾರಂಗಲ್ ಗೆ ಭೇಟಿ ನೀಡಿದ್ದ ಸಿಎಂ ಚಂದ್ರಶೇಖರ್ ಅವರು, ಪ್ರಸ್ತುತ ಕಾರ್ಯಾಚರಿಸುತ್ತಿರುವ ಎಂಜಿಎಂ ಆಸ್ಪತ್ರೆಯನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗುವುದು. ಪ್ರಸ್ತುತದ ಜೈಲು ಆವರಣವನ್ನು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.