Advertisement

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

08:59 AM Apr 07, 2020 | Nagendra Trasi |

ನವದೆಹಲಿ:ಮಾರಣಾಂತಿಕ ಕೋವಿಡ್ 19 ಸೋಂಕು ತಡೆಯುವ ನಿಟ್ಟಿನಲ್ಲಿ ಏಪ್ರಿಲ್ 14ರ ನಂತರವೂ ಲಾಕ್ ಡೌನ್ ಮುಂದುವರಿಸಬೇಕೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸೋಮವಾರ ಒತ್ತಾಯಿಸಿದ್ದಾರೆ.

Advertisement

ದೇಶದ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ಚಂದ್ರಶೇಖರ್ ರಾವ್ ಲಾಕ್ ಡೌನ್ ಮುಂದುವರಿಸುವಂತೆ ಮನವಿ ಮಾಡಿಕೊಂಡ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ನಿಜಾಮುದ್ದೀನ್ ಮರ್ಕಜ್ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಲವಾರು ಮಂದಿಗೆ ಕೋವಿಡ್ 19 ಸೋಂಕು ತಗುಲಿದ್ದರಿಂದ ತೆಲಂಗಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ ಎಂದು ವರದಿ ತಿಳಿಸಿದೆ.

ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಬೇರೆ ದಾರಿ ಇಲ್ಲ. ಹೀಗಾಗಿ ಲಾಕ್ ಡೌನ್ ಅನ್ನು ಮುಂದುವರಿಸುವುದು ಸೂಕ್ತ ಎಂದು ಚಂದ್ರಶೇಖರ್ ರಾವ್ ತಿಳಿಸಿದ್ದಾರೆ. ನಾನು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ, ಎಲ್ಲಾ ಮುಖ್ಯಮಂತ್ರಿಗಳ ಜತೆ ಮಾತನಾಡಿ ಲಾಕ್ ಡೌನ್ ಅನ್ನು ಜೂನ್ ವರೆಗೆ ಮುಂದುವರಿಸುವಂತೆ ಕರೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ. ಇಲ್ಲದಿದ್ದರೆ ಕೋವಿಡ್ 19 ಸೋಂಕು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಿಂಗಾಪುರ್ ನಂತಹ ಚಿಕ್ಕ ದೇಶ ಕೂಡಾ ಇನ್ನೂ ಒಂದು ತಿಂಗಳ ಕಾಲಾವಧಿಗೆ ಲಾಕ್ ಡೌನ್ ಅನ್ನು ಮುಂದುವರಿಸಿದೆ. ನಮ್ಮದು ಬಹು ದೊಡ್ಡ ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ನಾವು ಆರ್ಥಿಕ ಪರಿಸ್ಥಿತಿಯಿಂದ ಚೇತರಿಸಿಕೊಳ್ಳಬಹುದು ಆದರೆ ಜೀವವನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ನಮ್ಮ ಬಳಿ ಇರುವ ಏಕೈಕ ಆಯುಧ ಎಂದರೆ ಲಾಕ್ ಡೌನ್ ಮಾತ್ರ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next