Advertisement
ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಸಿಎಂ ಕೆಸಿಆರ್, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಆಡಳಿತವು ದೇಶವನ್ನು ಕಾಡುತ್ತಿರುವ ಹಲವಾರು ಅನಿಷ್ಟಗಳಿಗೆ ಕಾರಣವಾಗಿದೆ ಎಂದರು. ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Related Articles
Advertisement
ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಲು ಕೆಸಿಆರ್ ಅವರ ಆರನೇ ಪ್ರವಾಸ ಇದಾಗಿದೆ. ಈ ಹಿಂದೆ ಅವರು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಮತ್ತು ಅವರ ಪುತ್ರ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಶಿವಸೇನೆಯ ಉದ್ಧವ್ ಠಾಕ್ರೆ, ತಮಿಳುನಾಡು ಸಿಎಂ ಮತ್ತು ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು. ನವದೆಹಲಿ ಮತ್ತು ಪಂಜಾಬ್ ಪ್ರವಾಸದಲ್ಲಿ ಅವರು ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರನ್ನು ಭೇಟಿಯಾದರು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನು ಎರಡು ಬಾರಿ ಭೇಟಿಯಾಗಿದ್ದಾರೆ.