Advertisement

Telangana: ಲೈವ್ ಕಾರ್ಯಕ್ರಮದಲ್ಲೇ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಬಿಆರ್‌ಎಸ್ ಶಾಸಕ

11:21 AM Oct 26, 2023 | Team Udayavani |

ಹೈದರಾಬಾದ್: ಇದೆ ಬರುವ ನವೆಂಬರ್ 30 ರಂದು ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ಗಗನಕ್ಕೇರುತ್ತಿದೆ. ಪ್ರತಿಸ್ಪರ್ಧಿ ಪಕ್ಷಗಳು ಮತದಾರರನ್ನು ಓಲೈಸಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

Advertisement

ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಪಿ ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬುಧವಾರ ಲೈವ್ ಡಿಬೇಟ್ ಕಾರ್ಯಕ್ರಮದ ವೇಳೆ ಚರ್ಚೆ ನಡೆಯುತ್ತಿರುವ ವೇಳೆ ಬಿಆರ್‌ಎಸ್ ಶಾಸಕ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಮೇಲೆ ಏಕಾಏಕಿ ದಾಳಿಗೆ ಮುಂದಾಗಿದ್ದಾರೆ ಅಲ್ಲದೆ ಬಿಜೆಪಿ ಅಭ್ಯರ್ಥಿಯ ಕುತ್ತಿಗೆಗೆ ಕೈ ಹಾಕಿ ಒತ್ತಿ ಹಿಡಿದ್ದಾರೆ. ಉದ್ವಿಗ್ನತೆ ಹೆಚ್ಚಾದಾಗ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಡಳಿತಾರೂಢ ಬಿಆರ್‌ಎಸ್ ವಿರುದ್ಧ ಬಿಜೆಪಿ ವಾಗ್ದಾಳಿ:
ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಆಡಳಿತಾರೂಢ ಬಿಆರ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತಿಪಕ್ಷದ ಅಭ್ಯರ್ಥಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಖಂಡನೀಯ,ಒಂದು ವೇಳೆ ಬಿಆರ್‌ಎಸ್ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ಗತಿ ಏನಾಗುತ್ತದೆ ಎಂದು ಊಹಿಸಿ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next