ಹೈದರಾಬಾದ್: ತಮಿಳಿಸೈ ಸೌಂದರರಾಜನ್ ಅವರು ತೆಲಂಗಾಣ ರಾಜ್ಯಪಾಲ ಹುದ್ದೆಗೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ ಅವರು ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ತಮಿಳಿಸೈ ಸೌಂದರರಾಜನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪಾದಿ ಮುರ್ಮು ಅವರಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ ಅದರ ಮುಂದುವರೆದ ಭಾಗವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Rescue: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತ್ಯು… ಅವಶೇಷಗಳಡಿ ಸಿಲುಕಿರುವವರಿಗೆ ಶೋಧ