ಹೈದರಾಬಾದ್: ರಾಜ್ಯದಲ್ಲಿ ಎಗ್ಗಿಲ್ಲದೆ ಹಬ್ಬುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಅಂಕುಶ ಹಾಕುವಂತೆ ರಾಜ್ಯ ಹೈಕೋರ್ಟ್ ತೆಲಂಗಾಣ ಸರ್ಕಾರಕ್ಕೆ ತಿಳಿಸಿದೆ.
ಸೋಮವಾರ ಈ ಬಗ್ಗೆ ಆದೇಶ ಹೊರಡಿಸಿರುವ ಹೈಕೋರ್ಟ್, ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ವೈರಸ್ ತಡೆಗೆ ರಾಜ್ಯಾದ್ಯಂತ ಮುಂದಿನ 48 ಗಂಟೆಯೊಳಗೆ ಲಾಕ್ ಡೌನ್ ಇಲ್ಲವೆ ಕರ್ಫ್ಯೂ ಜಾರಿ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.
ತೆಲಂಗಾಣದಲ್ಲಿ ಭಾನುವಾರ ಅಂಕಿಅಂಶಗಳ ಪ್ರಕಾರ 24 ಗಂಟೆಗಳಲ್ಲಿ 5093 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,619 ಮಂದಿ ಪ್ರಾಣ ಬಿಟ್ಟಿದ್ದು, 1,44,178 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ತೆಲಂಗಾಣದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿವೆ. ಅಲ್ಲಿಯ ಸರ್ಕಾರ ನೂತನ ಮಾರ್ಗದರ್ಶಿಗಳನ್ನು ಬಿಡುಗಡೆಗೊಳಿಸಿದೆ.