ಹೈದರಾಬಾದ್: ಸಂವಿಧಾನ ಶಿಲ್ಫಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹಮಾರಾ ಪ್ರಸಾದ್ ಬಂಧಿತ ವ್ಯಕ್ತಿ. ಹಮಾರಾ ಪ್ರಸಾದ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ? : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ವಿಡಿಯೋ ಮಾಡಿದ್ದಾರೆ.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಹುಜನ ಸಮಾಜವಾದಿ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್.ಎಸ್.ಪ್ರವೀಣ್ ಕುಮಾರ್ ಹೈದರಾಬಾದ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಬಳಿಕ ಐಪಿಸಿ ಸೆಕ್ಷನ್ 153 A and 505 (2) ಅಡಿಯಲ್ಲಿ ಹಮಾರಾ ಪ್ರಸಾದ್ ಎಬ ವ್ಯಕ್ತಿಯನ್ನು ಬಂಧಿಸಿದ್ದಾರೆ.