Advertisement

ತೆಲಂಗಾಣ ಮಾದರಿಯಲ್ಲಿ ಹೊಸ ಮರಳು ನೀತಿ: ಪಾಟೀಲ

06:21 PM May 02, 2020 | Suhan S |

ಗದಗ: ಜನತೆಗೆ ಕಡಿಮೆ ದರದಲ್ಲಿ ಸುಲಭ ಹಾಗೂ ಪಾರದರ್ಶಕವಾಗಿ ಮರಳು ದೊರೆಯುವಂತೆ ಮಾಡಲು ತೆಲಂಗಾಣ ಮಾದರಿಯಲ್ಲಿ ಹೊಸ ಮರಳು ನೀತಿಗೆ ರಾಜ್ಯ ಸಂಪುಟ ಸಭೆ ಅನುಮೋದನೆ ನೀಡಿದೆ. ಅದರಂತೆ ಈಗಾಗಲೇ ಖಾಸಗಿಯವರ ಬಳಿ ಇರುವ ಮರಳು ಪಾಯಿಂಟ್‌ಗಳ ಅವಧಿ ಮುಗಿದ ಬಳಿಕ ನವೀಕರಿಲಾಗುವುದಿಲ್ಲ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಳು ಗಣಿಗಾರಿಕೆ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಿರ್ವಹಿಸುವ ಉದ್ದೇಶದಿಂದ ಮೊಬೈಲ್‌ ಆ್ಯಪ್‌ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರಿಂದ ಗ್ರಾಹಕರು ನೇರವಾಗಿ ಮರಳು ಪಡೆಯಲು ಅನುಕೂಲವಾಗುತ್ತದೆ. ಅಕ್ರಮ ಗಣಿಗಾರಿಕೆಯನ್ನು ತಡೆ ಗಟ್ಟಲು ಹೊಸದಾಗಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲಾಗುತ್ತಿದೆ. ಅಕ್ರಮ ಮರಳುಗಾರಿಕೆಯಲ್ಲದೇ ಅನಧಿಕೃತ ಖನಿಜ ಗಣಿಗಾರಿಕೆ, ಸಾಗಾಣಿಕೆ ಮತ್ತು ಅನಧಿಕೃತ ಖನಿಜ ದಾಸ್ತಾನು ವಿರುದ್ಧ ಪರಿಣಾಮಕಾರಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೊಸ ಮರಳು ನೀತಿಯನ್ವಯ ಹಳ್ಳ, ತೊರೆ, ಕೆರೆಗಳಲ್ಲಿನ ಮರಳು ನಿಕ್ಷೇಪಗಳನ್ನು ತೆಗೆಯಲು ಆಯಾ ಗ್ರಾಪಂಗಳಿಂದ ಅನುಮತಿ ಪಡೆಯಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ನಿರ್ವಹಿಸುವ ಸಮುದಾಯಿತ್ವ ಕಾಮಗಾರಿಗಳು, ಮನೆ, ರಸ್ತೆ ಕಾಮಗಾರಿಗಳಿಗೆ ಲಘು ವಾಹನ ಮತ್ತು ಎತ್ತಿನ ಗಾಡಿಗಳ ಮೂಲಕ ಮರಳು ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ನದಿ, ಅಣೆಕಟ್ಟುಗಳ ಹಿನ್ನೀರಿನ ಪ್ರದೇಶಗಳಲ್ಲಿನ ಮರಳು ನಿಕ್ಷೇಪಗಳನ್ನು ಸರರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳ ಮೂಲಕ ಗ್ರಾಹಕರಿಗೆ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿಪ ಸದಸ್ಯ ಎಸ್‌.ವಿ.ಸಂಕನೂನರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಡಾ| ಆನಂದ ಕೆ., ಎಸ್‌ಪಿ ಯತೀಶ ಎನ್‌. ಸುದ್ದಿಗೋಷ್ಠಿಯಲ್ಲಿರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next