Advertisement

ಪರೀಕ್ಷೆ ಬರೆಯಲು ಸಿಗದ ಅವಕಾಶ… ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

10:12 AM Mar 01, 2024 | Team Udayavani |

ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಟೇಕಂ ಶಿವಕುಮಾರ್ ಎಂದು ಗುರುತಿಸಲಾಗಿದೆ.

ಡೆತ್ ನೋಟ್ ಪತ್ತೆ:
ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಬಳಿ ತೆಲುಗಿನಲ್ಲಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ “ನನ್ನನ್ನು ಕ್ಷಮಿಸಿ, ಅಪ್ಪಾ, ನಾನು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ನನ್ನನ್ನು ಕ್ಷಮಿಸಿಬಿಡಿ. ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾನೆ.

ಶಿಕ್ಷಣ ಮಂಡಳಿಯ ಕಟ್ಟುನಿಟ್ಟಿನ ಕ್ರಮ:
ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಬರಬೇಕೆಂದು ಶಿಕ್ಷಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಇದರ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಕುಟುಂಬಸ್ಥರ ಆಕ್ರಂದನ:
ವಿದ್ಯಾರ್ಥಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ, ಈ ವೇಳೆ ಶಿವಕುಮಾರ್ ದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Advertisement

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: KFD; ದ.ಕ.ದಲ್ಲಿ ಮಂಗನಕಾಯಿಲೆ ಕಂಡುಬಂದಿಲ್ಲ; ಮುನ್ನೆಚ್ಚರಿಕೆ ಕ್ರಮ: ಡಿಎಚ್‌ಒ ಡಾ| ತಿಮ್ಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next