ಹೈದರಾಬಾದ್: ಗನ್ ಪಾಯಿಂಟ್ ನಿಂದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಸಬ್ ಇನ್ಸ್ ಪೆಕ್ಟರ್ ನನ್ನು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಇದನ್ನೂ ಓದಿ:Tragedy: ಪತ್ನಿ, ಮಗಳ ದುರಂತ ಸಾವು… ಜೈಲಿಗೆ ಹೋದ ಮಗ, ಖಿನ್ನತೆಯಿಂದ ಪತಿಯೂ ಮೃತ
ಪಿಟಿಐ ವರದಿ ಪ್ರಕಾರ, ಈ ಘಟನೆ ತೆಲಂಗಾಣದ ಜಯಶಂಕರ್ ಭೂಪಾಲ್ ಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದೆ.
ಘಟನೆ ಬಗ್ಗೆ ಹೆಡ್ ಕಾನ್ಸ್ ಟೇಬಲ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅದರಂತೆ ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಭವಾನಿ ಸೇನ್ ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸಿದ್ದರು. ತನಿಖೆಯ ವೇಳೆ ದೈಹಿಕ ದೌರ್ಜನ್ಯ ನಡೆಸಿರುವುದು ಸಾಬೀತಾಗಿತ್ತು ಎಂದು ತೆಲಂಗಾಣ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಕಾಳೇಶ್ವರಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಭವಾನಿ ಸೇನ್ ಅವರು ಜೂನ್ 16ರಂದು ನೀರಾವರಿ ಯೋಜನೆಯ ವಸತಿ ಸೌಲಭ್ಯದಲ್ಲಿರುವ ಅತಿಥಿ ಗೃಹದಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿದ್ದರು.
ಸೇನ್ ನೀಡಿರುವ ದೂರಿನ ಅನ್ವಯ, ಸಬ್ ಇನ್ಸ್ ಪೆಕ್ಟರ್ ಹಣೆಗೆ ರಿವಾಲ್ವರ್ ಇಟ್ಟು ಬೆದರಿಸಿ ಅತ್ಯಾಚಾರ ಎಸಗಿರುವುದಾಗಿ ಉಲ್ಲೇಖಿಸಿದ್ದಾರೆ. ಎಸ್ ಐ ವಿರುದ್ಧ ಸೇನ್ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಗೆ ದೂರು ನೀಡಿದ್ದು, ಅದರಂತೆ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಎಸ್ ಐಯನ್ನು ಕರ್ತವ್ಯದಿಂದ ವಜಾಗೊಳಿಸಿರುವುದಾಗಿ ವರದಿಯಾಗಿದೆ.