Advertisement

ಮೌನ ಮುರಿದ ಕೆಸಿಆರ್: ಪಶುವೈದ್ಯೆ ಅತ್ಯಾಚಾರ,ಕೊಲೆ ಪ್ರಕರಣ ತ್ವರಿತ ವಿಚಾರಣೆಗೆ ಆದೇಶ

09:55 AM Dec 03, 2019 | Mithun PG |

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಇಡೀ ದೇಶವನ್ನು ತಲ್ಲಣ ಗೊಳಿಸಿದ್ದು ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದರೂ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡದೇ ಟೀಕೆಗಳಿಗೆ ಗುರಿಯಾಗಿದ್ದ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಆದೇಶಿಸಿದ್ದಾರೆ. ಮಾತ್ರವಲ್ಲದೆ ಸಂತ್ರಸ್ಥೆಯ ಪೋಷಕರಿಗೆ ತೆಲಂಗಾಣ ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧವಾಗಿದೆ ಎಂದಿದ್ದಾರೆ.

Advertisement

ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಭೀಕರ ಮತ್ತು ಅತ್ಯಂತ ನೀಚ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ. ಅತ್ಯಾಚಾರ, ಕೊಲೆ ಮಾಡುವಂತಹ ವ್ಯಕ್ತಿಗಳು ನಮ್ಮ ನಡುವೆ ವಾಸಿಸುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ.

ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸುವಂತೆ ಆದೇಶಿಸಿದ್ದು, ಇದಕ್ಕಾಗಿ ವಿಶೇಷ ತುರ್ತು ಮತ್ತು ತ್ವರಿತ ವಿಚಾರಣಾ ನ್ಯಾಯಪೀಠ ರಚನೆ ಮಾಡಲು ಆದೇಶ ನೀಡಿದ್ದಾರೆ. ಅಲ್ಲದೆ ಸಂತ್ರಸ್ಥೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಅವರು, ಕಾನೂನಾತ್ಮಕವಾಗಿ ಮಾತ್ರವಲ್ಲದೇ ಕುಟುಂಬಕ್ಕೆ ನೈತಿಕ ಸ್ಛೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ. ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next