Advertisement

ಬಜೆಟ್ 2022: ಮಾನಸಿಕ ಆರೋಗ್ಯ ವರ್ಧನೆಗೆ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ ಘೋಷಣೆ

11:57 AM Feb 01, 2022 | Team Udayavani |

ಹೊಸದಿಲ್ಲಿ: ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಕ್ರಮಕ್ಕೆ ಐಐಟಿ ಬೆಂಗಳೂರು ತಾಂತ್ರಿಕ ಬೆಂಬಲವನ್ನು ನೀಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

Advertisement

2022ರ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಘೋಷಣೆಗಳನ್ನು ಮಾಡಿದ್ದಾರೆ.

ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗಾಗಿ ಮುಕ್ತ ವೇದಿಕೆಯನ್ನು ಹೊರತರಲಾಗುವುದು ಎಂದು ಅವರು ಹೇಳಿದರು.

“ಇದು ಆರೋಗ್ಯ ಪೂರೈಕೆದಾರರ ಡಿಜಿಟಲ್ ನೋಂದಣಿಗಳು ಮತ್ತು ಆರೋಗ್ಯ ಸೌಲಭ್ಯಗಳು, ಆರೋಗ್ಯ ಸೌಲಭ್ಯಗಳಿಗೆ ಸಾರ್ವತ್ರಿಕ ಪ್ರವೇಶವನ್ನು ಒಳಗೊಂಡಿರುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ:ದೇಶದ ಐದು ನದಿ ಜೋಡಣೆಗೆ ಬಜೆಟ್ ನಲ್ಲಿ ಅಸ್ತು: 44,605 ಕೋಟಿ ರೂ ಅನುದಾನ

Advertisement

ದೇಶದಲ್ಲಿ ಯುವಕರು, ಮಹಿಳೆಯರು ಮತ್ತು ಬಡ ವರ್ಗದವರನ್ನು ಸಬಲೀಕರಣಗೊಳಿಸುವತ್ತ ಸರ್ಕಾರ ಗಮನಹರಿಸಿದೆ ಎಂದ ಅವರು, 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು.

ನದಿ ಜೋಡಣೆ: ದೇಶದ ಐದು ಪ್ರಮುಖ ನದಿಗಳ ಜೋಡಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಗೋದಾವರಿ- ಕೃಷ್ಣಾ, ಕಾವೇರಿ-ಪೆನ್ನಾರ್, ನರ್ಮದಾ- ಗೋದಾವರಿ, ಕೃಷ್ಣಾ-ಪೆನ್ನಾರ್ ನದಿಗಳ ಜೋಡಣೆ ಮಾಡಲಾಗುವುದು ಎಂದರು. ಈ ಯೋಜನೆಗೆ 44,605 ಕೋಟಿ ರೂ ಅನುದಾನ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

ದೇಶದ ಎರಡನೇ ಅತೀ ದೊಡ್ಡ ನದಿಯಾದ ಗೋದಾವರಿ ಮತ್ತು ಐದನೇ ದೊಡ್ಡ ನದಿ ನರ್ಮದಾ ನದಿ ಜೋಡಣೆಗೆ ಅನುಮತಿ ನೀಡಲಾಗಿದೆ. ಕರ್ನಾಟಕದಲ್ಲಿ ಹರಿಯುವ ಕಾವೇರಿ, ಕೃಷ್ಣಾ ಮತ್ತು ಪೆನ್ನಾರ್ (ಪಿನಾಕಿನಿ) ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಅನುಮತಿ ನೀಡಿದೆ.

ಇದನ್ನೂ ಓದಿ:Live Updates:ಕೇಂದ್ರ ಬಜೆಟ್ ಮಂಡನೆ ಶುರು; ಪೋಸ್ಟ್ ಆಫೀಸ್ ಗಳಿಗೆ ಬ್ಯಾಂಕ್ ಸ್ವರೂಪ

Advertisement

Udayavani is now on Telegram. Click here to join our channel and stay updated with the latest news.

Next