ಕೃಷ್ಣನಗರ: ಪ್ರಧಾನಿಯವರಿಗೆ ಇಂಗ್ಲಿಷ್ ಬಾರದೇ ಇದ್ದ ಕಾರಣ ಅವರು ಭಾಷಣ ಮಾಡುವ ವೇಳೆ ಟೆಲಿಪ್ರಾಂಪ್ಟರ್‌ಗಳನ್ನು ಬಳಸುತ್ತಿದ್ದಾರೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು ಬಹಳ ದೀರ್ಘವಾಗಿ ಭಾಷಣ ಮಾಡುವ ಅವರಿಗೆ ಇಂಗ್ಲಿಷ್ ಬರದೇ ಇರುವ ಕಾರಣಕ್ಕಾಗಿ ಟೆಲಿಪ್ರಾಂಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಮಾತನಾಡುತ್ತಾರೆ. ಮಾಧ್ಯಮದವರಿಗೆ, ನನಗೆ ಎಲ್ಲರಿಗೂ ಈ ವಿಚಾರ ಗೊತ್ತು ಎಂದು ಲೇವಡಿ ಮಾಡಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ “ಆಯುಷ್ಮಾನ್ ಭಾರತ’ ಯೋಜನೆಯಿಂದ ಹಿಂದೆ ಸರಿಯುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಘೋಷಣೆ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಯೋಜನೆ ವಿಚಾರದಲ್ಲಿ ಪ್ರಧಾನಿ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವುದಾಗಿ ದೀದಿ ಘೋಷಣೆ ಮಾಡಿದ್ದಾರೆ. ಫಲಾನುಭವಿಗಳಿಗೆ ಪತ್ರ ಕಳುಹಿಸುವ ಮೂಲಕ ಪ್ರಧಾನಿ ಗಿಮಿಕ್ ಮಾಡುತ್ತಿದ್ದಾರೆ ಎಂದಿದ್ದಾರೆ.