Advertisement

ಕೇಂದ್ರದಿಂದ ಕೈ ನಾಯಕರ ದೂರವಾಣಿ ಕದ್ದಾಲಿಕೆ

09:55 AM Aug 18, 2019 | Lakshmi GovindaRaj |

ಬೆಂಗಳೂರು: ಕೇಂದ್ರ ಸರ್ಕಾರ ಕಾಂಗ್ರೆಸ್‌ ನಾಯಕರ ದೂರವಾಣಿಗಳನ್ನು ಕದ್ದಾಲಿಕೆ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಈ ಬಗ್ಗೆ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುವುದನ್ನು ಬಿಟ್ಟು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆಗ್ರಹಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಕಾಂಗ್ರೆಸ್‌ ನಾಯಕರ ದೂರವಾಣಿಗಳನ್ನು ಕದ್ದಾಲಿಕೆ ಮಾಡುತ್ತಿದ್ದು, ಇಂದಿಗೂ ನಮ್ಮ ದೂರವಾಣಿ ಕದ್ದಾಲಿಕೆ ಮುಂದುವರೆದಿದೆ. ಸರ್ಕಾರ ನಡೆಸುವವರೇ ಈ ಬಗ್ಗೆ ಆರೋಪ ಮಾಡಿದರೆ ಹೇಗೆ? ದೂರವಾಣಿ ಕದ್ದಾಲಿಕೆ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಹೇಳಿದರು.

ದೇಶದ ಇತಿಹಾಸದಲ್ಲೇ ಸಚಿವ ಸಂಪುಟವಿಲ್ಲದೆ ಆಡಳಿತ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪದಾಖಲೆ ನಿರ್ಮಿಸಿದ್ದಾರೆ. ದೆಹಲಿಗೆ ತೆರಳಿರುವ ಅವರು ಪ್ರಧಾನಿಯನ್ನು ಭೇಟಿಯಾಗಿದ್ದಾರಷ್ಟೆ. ಸಂಪುಟ ರಚನೆ ಕುರಿತು ಗೃಹ ಸಚಿವರ ಕಚೇರಿಯಿಂದಾಗಲಿ ಅಥವಾ ಪ್ರಧಾನಿ ಕಾರ್ಯಾಲಯದಿಂದಾಗಲಿ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಕೇವಲ ಪ್ರಧಾನಿಯನ್ನು ಭೇಟಿಯಾದರಷ್ಟೇ ಸಾಲದು. ರಾಜ್ಯದಲ್ಲಿ ಪ್ರವಾಹಪೀಡಿತ ಪ್ರದೇಶಗಳಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಬೇಕು ಎಂದು ಆಗ್ರಹಿಸಿದರು.

ನನ್ನ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆಯಾಗಿಲ್ಲ
ಬೆಂಗಳೂರು: “ನಾನು ಗೃಹ ಸಚಿವನಾಗಿದ್ದ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆ ನಡೆದಿಲ್ಲ. ಒಂದು ವೇಳೆ, ನಡೆದಿದ್ದರೂ ಅದು ನನ್ನ ಗಮನಕ್ಕೆ ಬಂದಿಲ್ಲ. ಇದು ಗೃಹ ಸಚಿವರ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಮಾಜಿ ಡಿಸಿಎಂ ಪರಮೇಶ್ವರ್‌ ಹೇಳಿದ್ದಾರೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಒಂದು ವೇಳೆ ದೂರವಾಣಿ ಕದ್ದಾಲಿಕೆ ನಡೆದಿದ್ದರೆ ತನಿಖೆ ನಡೆಸಬಹುದು. ಭಯೋತ್ಪಾದಕರು ಮತ್ತು ಅಪರಾಧಿಗಳ ಚಲನವಲನಗಳ ಮೇಲೆ ಕಣ್ಣಿಡಲು ಗೃಹ ಇಲಾಖೆಯವರು ಅನುಮತಿ ಪಡೆದು ದೂರವಾಣಿ ಕದ್ದಾಲಿಕೆ ಮಾಡುತ್ತಾರೆ. ಅದನ್ನು ಹೊರತುಪಡಿಸಿದರೆ ಉಳಿದ ಸಂದ ರ್ಭಗಳಲ್ಲಿ ಫೋನ್‌ ಕದ್ದಾಲಿಕೆ ನಡೆದಿರಲು ಸಾಧ್ಯವಿಲ್ಲ ‘ ಎಂದು ಹೇಳಿದರು.

Advertisement

ಫೋನ್‌ ಕದ್ದಾಲಿಕೆಯ ಬಗ್ಗೆ ಮಾಧ್ಯಮಗಳಲ್ಲಿ ಹೇಗೆ ಬಂದಿದೆಯೋ ಗೊತ್ತಿಲ್ಲ. ನಾನು ನನಗೆ ಗೊತ್ತಿರುವವರನ್ನು ವಿಚಾರಿಸಿದೆ. ಯಾವುದೇ ರೀತಿಯ ಟ್ಯಾಪಿಂಗ್‌ ಆಗಿಲ್ಲ. ನಾವು ಇಂತಹ ಕೆಲಸಕ್ಕೆ ಕೈ ಹಾಕಿಲ್ಲ. ಈ ಬಗ್ಗೆ ಯಾವುದೇ ತನಿಖೆ ಬೇಕಾದರೂ ಮಾಡಲಿ. ನಮ್ಮ ಅಭ್ಯಂತರವಿಲ್ಲ.
-ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ

ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ಫೋನ್‌ ಕದ್ದಾಲಿಕೆ ಆಗಿದೆ ಎಂಬ ಆರೋಪ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಫೋನ್‌ ಕದ್ದಾಲಿಕೆ ಮಾಡುವುದು ಹೊಸದೇನಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಸಹ ಫೋನ್‌ ಕದ್ದಾಲಿಕೆ ಮಾಡಿದೆ. ಪ್ರಸ್ತುತ ನಡೆದಿದೆ ಎನ್ನಲಾದ ಫೋನ್‌ ಕದ್ದಾಲಿಕೆ ಬಗ್ಗೆ ತನಿಖೆ ನಡೆಯಲಿ. ಆಗ ನಿಜಾಂಶ ಏನೆಂಬುದು ಗೊತ್ತಾಗಲಿದೆ.
-ಡಿ.ಸಿ. ತಮ್ಮಣ್ಣ, ಮಾಜಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next