Advertisement

“ಪ್ರತಿ ಮನೆ ಮನೆಗೆ ಕಾಂಗ್ರೆಸ್‌ ಸಾಧನೆ ತಿಳಿಸಿ’

12:50 PM Dec 28, 2017 | Team Udayavani |

ದೇವನಹಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಮನೆ ಮನೆಗೆ ತಿಳಿಸಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಆಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಐಎನ್‌ಟಿಸಿಯು ಕಾಂಗ್ರೆಸ್‌ ತಾಲೂಕು ಕಾರ್ಯಾಧ್ಯಕ್ಷ ರಾಜೇಶ್‌ ಕಾರ್ಯಕರ್ತರಿಗೆ ಸಲಹೆ ನೀಡಿದರು.

Advertisement

ನಗರದ ಯಲಹಂಕ ಬೀದಿಯಲ್ಲಿ ತಾಲೂಕು ಐಎನ್‌ಟಿಸಿಯು ಕಾಂಗ್ರೆಸ್‌ ಮತ್ತು ಎನ್‌ಎಸ್‌ಐಯುಐ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನೂತನ ಟೌನ್‌ ಕಾಂಗ್ರೆಸ್‌ ಅಧ್ಯಕ್ಷ ಉತ್ತನಲ್ಲಪ್ಪನವರ ವೇಣುಗೋಪಾಲ್‌ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸ್ವತಂತ್ರ ನಂತರ ಯಾವ ಸರ್ಕಾರವೂ ಬಯಲುಸೀಮೆ ನೀರಿನ ಬವಣೆ ಬಗ್ಗೆ ಚಿಂತಿಸಿರಲಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ನಾಲ್ಕೂವರೆ ವರ್ಷದಲ್ಲಿ ಶುದ್ಧಕುಡಿಯುವ ನೀರಿಗೆ 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆ ಹಾಗೂ ಸುಮಾರು 870 ಕೋಟಿ ರೂ. ವೆಚ್ಚದಲ್ಲಿ ನಾಗವಾರ-ಹೆಬ್ಟಾಳ ಕೆರೆಯಿಂದ
ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸುವ ಮಹಾನ್‌ ಕಾರ್ಯವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಬಿಜೆಪಿ ಬಂದ ನಂತರ ಕೋಮು ದಳ್ಳುರಿ ಹೆಚ್ಚಳ: ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಕೋಮುವಾದಿ ಬಿಜೆಪಿ ದೇಶದ ಒಕ್ಕೂಟ ವ್ಯವಸ್ಥೆಗೆ ಅಭದ್ರತೆ ತರುತ್ತಿದೆ. ಕಳೆದ ಮೂರೂವರೆ ವರ್ಷದಲ್ಲಿ ದೇಶದಲ್ಲಿ ಮತೀಯ ಕೋಮು ಗಲಭೆಗಳು ಹೆಚ್ಚಾಗಿವೆ. ಬಿಜೆಪಿ ಆಳ್ವಿಕೆಯಿರುವ ರಾಜ್ಯಗಳಲ್ಲಿ ಹೆಚ್ಚು ಕೋಮು ದಳ್ಳುರಿಗಳು ನಡೆಯುತ್ತಿವೆ. ಕಳೆದ ನಾಲ್ಕೂವರೆ ವರ್ಷದಲ್ಲಿ ಸಿದ್ದರಾಮಯ್ಯ ನಡೆಸಿದ ಜನಪರ ಆಡಳಿತ ಜನಮನ ಮುಟ್ಟಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೂಲಕ ಬಡ ಜನತೆ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ರಾಜ್ಯದ ಜನ ಕಾಂಗ್ರೆಸ್‌ ಪರವಾಗಿದ್ದು ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.

ಪಕ್ಷ ಬಲವರ್ಧನೆ: ನೂತನ ಟೌನ್‌ ಕಾಂಗ್ರೆಸ್‌ ಅಧ್ಯಕ್ಷ ವೇಣುಗೋಪಾಲ್‌ ಮಾತನಾಡಿ, ಪಕ್ಷದ ವರಿಷ್ಠರು ತಮಗೆ ಜವಾಬ್ದಾರಿಯನ್ನು ನೀಡಿದ್ದು, ಪ್ರಾಮಾಣಿಕತೆ ಯಿಂದ ಕಾರ್ಯನಿರ್ವಹಿಸುತ್ತೇನೆ. ದೇವನಹಳ್ಳಿ ನಗರದ 23 ವಾರ್ಡ್‌ಗಳಲ್ಲಿ ಪಕ್ಷ ಬಲವರ್ಧನೆ ಮಾಡಲಾಗುವುದು. ವಿಧಾನಸಭಾ ಚುನಾವಣೆ ವೇಳೆಗೆ ಪ್ರತಿ ಬೂತಿನಲ್ಲೂ ಸಂಘಟಿಸಿ ಶಾಸಕರನ್ನು ಗೆಲ್ಲಿಸಿಕೊಳ್ಳುವುದು ಹಾಗೂ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತರಲು ಶ್ರಮವಹಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಐಎನ್‌ಟಿಯು ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಯು. ಎಂ.ಮಿಥುನ್‌, ಎನ್‌ಎಸ್‌ಯುಐ ತಾಲೂಕು
ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಭಾರ್ಗವ್‌, ಐಎನ್‌ಟಿಯು ಕಾಂಗ್ರೆಸ್‌ ಉಪಾಧ್ಯಕ್ಷ ಮಹೇಂದ್ರ, ರಮೇಶ್‌, ಪ್ರಧಾನ
ಕಾರ್ಯದರ್ಶಿ ವೆಂಕಟೇಶ್‌, ಕಾರ್ಯದರ್ಶಿ ಸುದರ್ಶನ್‌, ಮನೋಜ್‌, ಮಂಜುನಾಥ್‌, ವೇಣು, ಎನ್‌ಎಸ್‌ಯುಐ ಉಪಾಧ್ಯಕ್ಷ ಪ್ರೇಮ್‌, ಕಾರ್ಯಾಧ್ಯಕ್ಷ ಚರಣ್‌, ಪ್ರಧಾನ ಕಾರ್ಯದರ್ಶಿ ಮುನಿಶಾಮೇಗೌಡ ಮತ್ತಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next