Advertisement

ತೆಲುಗು ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರ

04:07 PM Nov 22, 2021 | Team Udayavani |

ತೆಲುಗು ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರಹೈದರಾಬಾದ್: ತೆಲುಗು ಜನಪ್ರಿಯ ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Advertisement

ಮನೆಯಲ್ಲಿ ಜಾರಿ ಬಿದ್ದ ಪರಿಣಾಮ ಅವರನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನ.20ರಂದು ಅವರ ಆರೋಗ್ಯ ಮತ್ತೆ ಕ್ಷೀಣಿಸಿದ ಪರಿಣಾಮ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ವರ್ಗ ತಿಳಿಸಿದೆ.

ಸದ್ಯ ಸತ್ಯನಾರಾಯಣ ಅವರಿಗೆ ಈಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸತ್ಯನಾರಾಯಣ ಆದಷ್ಟು ಬೇಗ ಗುಣಮುಖರಾಗಲಿ ಎಂದು ಟಾಲಿವುಡ್ ಸೇರಿದಂತೆ ಚಿತ್ರರಂಗದ ಗಣ್ಯರು ಆಶಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.

86 ವರ್ಷದ ಕೈಕಾಲ ಸತ್ಯನಾರಾಯಣ ಅವರು 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next