Advertisement

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

07:36 AM May 18, 2024 | Team Udayavani |

ಹೈದರಾಬಾದ್: ಕೆಲದಿನಗಳ ಹಿಂದಷ್ಟೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಟಿ ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಇದೀಗ ಆಕೆಯ ಗೆಳೆಯ ಚಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ.

Advertisement

ಭಾನುವಾರ(ಮೇ.12 ರಂದು) ಆಂಧ್ರದ ಕಾರು ಮಹೆಬೂಬ್‌ನಗರ ಜಿಲ್ಲೆಯ ಭೂತ್‌ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ (ಬಿ) ಗ್ರಾಮದ ಬಳಿ, ಪವಿತ್ರಾ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ತೀವ್ರ ಏಟಾಗಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇನ್ನು ಈ ಸಮಯದಲ್ಲಿ ಕಾರಿನಲ್ಲಿದ್ದ ಸಹನಟ ಚಂದು ಸೇರಿದಂತೆ ಮೂವರಿಗೆ ಗಾಯಗಳಾಗಿತ್ತು.

ಪವಿತ್ರಾ ಅವರ ಅಂತ್ಯಕ್ರಿಯೆಗೆ ಗಾಯ ಆಗಿದ್ದರೂ ಚಂದು ಬಂದಿದ್ದರು. ಈ ವೇಳೆ ತನ್ನ ಸ್ನೇಹಿತೆಯನ್ನು ಕಳೆದುಕೊಂಡ ದುಃಖದಲ್ಲಿ ಭಾವುಕರಾಗಿ ಮಾತನಾಡಿದ್ದರು.

ಶುಕ್ರವಾರ (ಮೇ.18 ರಂದು) ಹೈದರಾಬಾದ್ ನಿವಾಸದಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ತನ್ನ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿರುವ ಇವರು, 2015 ರಲ್ಲಿ ಶಿಲ್ಪಾ ಎನ್ನುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಎರಡು ಮಕ್ಕಳಿದ್ದಾರೆ.

ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಘಟನೆ ತೆಲುಗು ಕಿರುತೆರೆಯನ್ನು ಶಾಕ್ ಆಗಿಸಿದೆ.

ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next