Advertisement
ರಾಜ್ಯದ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಬಿಸಿಲಿನ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.
Related Articles
Advertisement
ಕಳೆದ 24 ಗಂಟೆಗಳಲ್ಲಿ ವಿಜಯಪುರ, ದಾವಣಗೆರೆ ಮತ್ತು ರಾಯಚೂರ ಜಿಲ್ಲೆಗಳಲ್ಲಿ ತಲಾ 38ಡಿ.ಸೆ., ಶಿವಮೊಗ್ಗ ಮತ್ತು ಕೊಪ್ಪಳ ತಲಾ 37.5, ಬೀದರ 37.4, ಗದಗ 37.3, ಚಿತ್ರದುರ್ಗ 36.9, ಬೆಳಗಾವಿ ವಿಮಾನ ನಿಲ್ದಾಣ, ಧಾರವಾಡ ಮತ್ತು ಹಾವೇರಿಯಲ್ಲಿ ಗರಿಷ್ಠ ತಲಾ 36.6, ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದಾವಣಗೆರೆಯಲ್ಲಿ 18ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದೆ.
ಉಳಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚೆ ನೀಡಿದೆ.
ರಾಜ್ಯದ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ: ರಾಜ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಾ.31ರ ವರೆಗೆ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.