ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ವಾಡಿಕೆಗಿಂತ ಅಧಿಕ ತಾಪಮಾನ ದಾಖಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ತುಸು ಮೋಡದಿಂದ ಕೂಡಿದ ವಾತಾವರಣ ಇತ್ತು. ಬೆಳಗ್ಗೆ 10 ಗಂಟೆಯ ಬಳಿಕ ಬಿಸಿಲಿನ ತಾಪ ಏರಿಕೆಯಾಗಿದ್ದು, ಮಧ್ಯಾಹ್ನದಿಂದ ಸಂಜೆಯವರೆಗೆ ಉರಿ ಬಿಸಿಲು ಮುಂದುವರಿದಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇದೇ ರೀತಿಯ ಬಿಸಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ಇಲ್ಲ.
40 ಡಿ.ಸೆ. ತಲುಪಿದ ತಾಪ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಧ್ಯಾಹ್ನ ವೇಳೆ ಉರಿ ಬಿಸಿಲು ಹೆಚ್ಚಾಗುತ್ತಿದ್ದು, ತಾಪಮಾನ 40 ಡಿ.ಸೆ. ಆಸಿಪಾಸಿಗೆ ತಲುಪಿದೆ. ಸರಾಸರಿ ತಾಪಮಾನದಲ್ಲಿಯೂ ಏರಿಕೆ ಕಾಣುತ್ತಿದ್ದು, ಮಂಗಳೂರಿನಲ್ಲಿ ಮಂಗಳವಾರ 34.4 ಡಿ.ಸೆ. ಗರಿಷ್ಠ ತಾಪಮಾನ ಮತ್ತು 26.8 ಡಿ.ಸೆ. ಕನಿಷ್ಠ ತಾಪಮಾನ ಇತ್ತು.
ಎಚ್ಚರ ಅಗತ್ಯ: ಬಿಸಿ ವಾತಾವರಣ ಇರಲಿದ್ದು, ಕರಾವಳಿಯ ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅದರಂತೆ ಮಧ್ಯಾಹ್ನ 12ರಿಂದ 3ರ ವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ, ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ, ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ, ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ, ಹಳೆಯ ಆಹಾರವನ್ನು ಸೇವಿಸಬೇಡಿ, ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ, ನಿಮಗೆ ಮೂಛೆì ಅಥವಾ ಅನಾರೋಗ್ಯ ಅನಿಸಿದರೆ, ñತ್‌ಕ್ಷಣ ವೈದ್ಯರನ್ನು ಭೇಟಿ ಮಾಡಿ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸನ್‌ಸ್ಟ್ರೋಕ್; ಚಿಕಿತ್ಸೆಗೆ ಸಲಹೆ
ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ, ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ಈ ವೇಳೆ ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ. ವ್ಯಕ್ತಿಗೆ ಕುಡಿಯಲು ಒಆರ್‌ಎಸ್, ಲಿಂಬೆ ಶರಬತ್, ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ. ತತ್‌ಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.