ಕಾಸರಗೋಡು: ಕೇರಳ ರಾಜ್ಯದಲ್ಲಿ ಮುಂದಿನ ನಾಲ್ಕು ದಿನವೂ ತಾಪಮಾನದಲ್ಲಿ ಹೆಚ್ಚಳವಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮೇ 2ರ ವರೆಗೆ ಕಾಸರಗೋಡು, ಆಲಪ್ಪುಳ, ಎರ್ನಾಕುಳಂ, ಮಲಪ್ಪುರಂ ಜಿಲ್ಲೆಗಳಲ್ಲಿ 37 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಹೆಚ್ಚಳ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಾಲಕ್ಕಾಡ್‌ನಲ್ಲಿ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ತನಕ ಹೆಚ್ಚಳ ಸಾಧ್ಯತೆಯಿದೆ ಎಂದಿದೆ.
ಪಾಲಕ್ಕಾಡ್, ಕಲ್ಲಿಕೋಟೆ, ಮಲಪ್ಪುರಂ, ತೃಶ್ಶೂರು, ಕೊಲ್ಲಂ, ಕಾಸರಗೋಡು ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಎರಡರಿಂದ 5.5 ಡಿಗ್ರಿ ಸೆಲ್ಸಿಯಸ್ ತನಕ ಹೆಚ್ಚಳ ಸಾಧ್ಯತೆಯಿದೆ.
ಕೊಲ್ಲಂ, ತೃಶ್ಶೂರು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಹೆಚ್ಚಳ ಸಾಧ್ಯತೆಯಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಕಲ್ಲಿಕೋಟೆ, ಕಣ್ಣೂರು ಜಿಲ್ಲೆಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ತನಕವೂ, ತಿರುವನಂತಪುರ ಜಿಲ್ಲೆಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಹೆಚ್ಚಳ ಸಾಧ್ಯತೆಯಿದೆ.