ನವದೆಹಲಿ: ಅತಿಕ್ರಮಣ ಕಟ್ಟಡಗಳ ತೆರವು ಕಾರ್ಯಾಚರಣೆಯಲ್ಲಿ ದೇವಸ್ಥಾನ, ಮಸೀದಿ ಸೇರಿದಂತೆ ಇನ್ನಿತರ ಕಟ್ಟಡಗಳನ್ನು ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆ ಶನಿವಾರ (ಫೆ.25) ಧ್ವಂಸಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳ ಹೆಸರು ಬದಲಿಸಲು ಕೇಂದ್ರ ಒಪ್ಪಿಗೆ…ಹೊಸ ಹೆಸರೇನು?
ವರದಿಯ ಪ್ರಕಾರ, ಪಾದಚಾರಿ ಮಾರ್ಗದಲ್ಲಿ ಈ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಿದ್ದು, ಅತಿಕ್ರಮಣ ಕಟ್ಟಡಗಳನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ನೀಡಿತ್ತು ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ನಾವು ದೇವಸ್ಥಾನ, ಮಸೀದಿ, ಅಂಗಡಿ, ಮನೆಗಳನ್ನು ಜೆಸಿಬಿ ಕಾರ್ಯಾಚರಣೆ ಮೂಲಕ ತೆರವುಗೊಳಿಸುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.