Advertisement

ರಾಮನಗರದಲ್ಲಿ ತಿಮ್ಮಪ್ಪನ ದೇಗುಲ

10:49 AM Jun 09, 2019 | Team Udayavani |

ಬೆಂಗಳೂರು: ಎಲ್ಲವೂ ಅಂದುಕೊಂಡಂತಾದರೆ, ತಿರುಪತಿ ತಿಮ್ಮಪ್ಪನ ದೇಗುಲವನ್ನು ರಾಮನಗರದಲ್ಲೂ ನೋಡಬಹುದು! ಹೌದು, ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಮುಂದಾಗಿರುವ ಸರ್ಕಾರ, ಇದಕ್ಕಾಗಿ 15 ಎಕರೆ ಜಾಗ ನೀಡಲು ಮುಂದಾಗಿದೆ. ಶೇಷವೆಂದರೆ, ಈ ದೇಗುಲವನ್ನು ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ವತಿಯಿಂದಲೇ ನಿರ್ಮಿಸಲಾಗುತ್ತದೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಧಾರ್ಮಿಕ ದತ್ತಿ ಇಲಾಖೆ ಅಧೀನದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಟಿಟಿಡಿ ವತಿಯಿಂದ ವೆಂಕಟೇಶ್ವರ ದೇಗುಲ, ಸಮುದಾಯ ಭವನವೂ ನಿರ್ಮಾಣವಾಗಲಿದೆ. ಇದಕ್ಕಾಗಿ ಅಗತ್ಯ ಇರುವ 15 ಎಕರೆ ಜಮೀನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ತಿರುಪತಿಯಲ್ಲಿ ಛತ್ರ: ಇನ್ನು ತಿರುಮಲ ತಿರುಪತಿಯಲ್ಲಿ ಸರ್ಕಾರದ ವತಿಯಿಂದಲೇ ಛತ್ರ ನಿರ್ಮಾಣವಾಗಲಿದೆ. 26 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವಂತೆ ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ವಿಚಿತ್ರವೆಂದರೆ ಕೇವಲ ಹಳೇಮೈಸೂರು ಭಾಗದ ದೇಗುಲಗಳ ಅಭಿವೃದ್ಧಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next