Advertisement
ಬಿಜೆಪಿ ಮುಸ್ಲಿಂ ವಿರೋಧಿ ಎಂದು ಮೊದಲು ಕಾಂಗ್ರೆಸ್ ಆರೋಪಿಸುತ್ತಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರಸ್ ಮುಖಂಡರು ಬಿಜೆಪಿ ಮುಸ್ಲಿಂ ವಿರೋಧಿ ಎಂದು ಆರೋಪ ಮಾಡುತ್ತಿಲ್ಲ. ಹೀಗಾಗಿ ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷವಲ್ಲ ಎಂದು ಕಾಂಗ್ರೆಸ್ ಕೊನೆಗೂ ಒಪ್ಪಿಕೊಂಡಂತಾಗಿದೆ. ಬಿಜೆಪಿ ವಿರುದ್ಧ ಮಾಡುತ್ತಿದ್ದದ್ದು ಹುಸಿ ಆರೋಪ ಎಂದು ಅವರಿಗೆ ಮನವರಿಕೆಯಾಗಿದೆ. ಕೇವಲ ಮತಬ್ಯಾಂಕ್‌ಗಾಗಿಯೇ ಈ ಆರೋಪ ಮಾಡಲಾಗುತ್ತಿತ್ತು ಎಂದು ಮೋದಿ ಟೀಕಿಸಿದ್ದಾರೆ.
ಮೊದಲ ಹಂತದ ಮತದಾನ ನಡೆಯುವ ದಿನ ಡಿ.9 ಹಾಗೂ ಹಿಂದಿನ ದಿನ ಡಿ.8ರಂದು ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡುವಂತಿಲ್ಲ ಎಂದು ಚುನಾವಣಾ ಆಯೋಗ ಸೂಚಿಸಿದೆ. ಈಗಾಗಲೇ ಪ್ರಮಾಣಪತ್ರ ಪಡೆದಿದ್ದರೆ ಮಾತ್ರ ಪ್ರಕಟಿಸಬಹುದು. ಈ ಹಿಂದೆ ಇಂತಹ ಕೃತ್ಯಗಳನ್ನು ನಾವು ಗಮನಿಸಿದ್ದೇವೆ. ಹೀಗಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ನಿತ್ಯ ಗುಜರಾತ್‌ಗೆ ತೆರಳುತ್ತಿರುವುದೇಕೆ?
ಗುಜರಾತ್‌ನಲ್ಲಿ ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದ್ದು ನಿಜವಾದರೆ, ಯಾಕೆ ಪ್ರತಿದಿನವೂ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಓಡುತ್ತಿದ್ದಾರೆ ಎಂದು ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಪ್ರಶ್ನಿಸಿದ್ದಾರೆ. ಜನರು ಬದಲಾವಣೆ ಬೇಕು ಎಂದು ಭಾವಿಸಿರುವುದು ಬಿಜೆಪಿಗೆ ತಿಳಿದಿದೆ. ಇದೇ ಕಾರಣಕ್ಕೆ ರಾಜ್ಯಕ್ಕೆ ಪದೇ ಪದೆ ಮೋದಿ ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.