ಈ ಸಂಬಂಧ ಶನಿವಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಪತ್ತು ನಿರ್ವಹಣ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಸಿಮೀತಗೊಳಿಸಿ ಜು. 3ರಂದು ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ ಹೊಸದಾಗಿ ಹೊರಡಿಸಲಾಗಿದೆ.
Advertisement
ರಾಜ್ಯಾದ್ಯಂತ ಮಂದಿರ, ಮಸೀದಿ, ಚರ್ಚ್, ಗುರುದ್ವಾರಗಳ ಸಹಿತ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಸಂಬಂಧಿಸಿದ ಧಾರ್ಮಿಕ ಚಟುವಟಿಕೆಗಳು, ಪೂಜೆ, ಅರ್ಚನೆ, ಸೇವೆ ಮತ್ತು ಪ್ರಾರ್ಥನೆಗಳಿಗೆ ರವಿವಾರ (ಜು. 25)ದಿಂದ ತೆರೆಯಲು ಅನುಮತಿ ನೀಡಲಾಗಿದೆ. ಈ ವೇಳೆ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಜಾತ್ರೆ, ದೇವಸ್ಥಾನ ಉತ್ಸವ, ಮೆರವಣಿಗೆ, ಸಭೆ-ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯಾದ್ಯಂತ ಮನೋರಂಜನ ಪಾರ್ಕ್ ಮತ್ತು ಇದೇ ರೀತಿಯ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದಕ್ಕೆ ಆರೋಗ್ಯ ಇಲಾಖೆಯು 2020ರ ನ. 12ರಂದು ಹೊರಡಿಸಿದ್ದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಷರತ್ತು ವಿಧಿಸಲಾಗಿದೆ. ಆದರೆ ಜಲಕ್ರೀಡೆ ಸಹಿತ ಈ ಸಂಬಂಧದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.