Advertisement
ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀಕ್ಷೇತ್ರ ಧರ್ಮಸ್ಥಳ, ಸೌತಡ್ಕ, ಶ್ರೀ ಮಹಾಗಣಪತಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ, ಮಂಗಳಾದೇವಿ, ಉಡುಪಿಯ ಶ್ರೀಕೃಷ್ಣ ಮಠ, ಕೊಲ್ಲೂರು ಶ್ರೀ ಮುಕಾಂಬಿಕಾ ದೇಗುಲಗಳಿಗೆ ಭಕ್ತರು ಭಾರೀ ಸಂಖ್ಯೆಯಲ್ಲಿ ಭೇಟಿ ನೀಡಿದರು.
ಕುಕ್ಕೆ: ರಜೆ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಹೆಚ್ಚಿನ ಭಕ್ತರ ಆಗಮನವಾಗಿದೆ. ಶನಿವಾರ ಸಂಜೆಯಿಂದಲೇ ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು. ಸೋಮವಾರ ಸರಕಾರಿ ರಜೆ ಇದ್ದ ಕಾರಣ ದೂರದ ಊರುಗಳಿಂದ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ದೇಗುಲದ ರಥ ಬೀದಿ, ಹೊರಾಂಗಣದಲ್ಲಿ, ಪೇಟೆಯಲ್ಲಿ ಭಕ್ತರ ದಟ್ಟಣೆ ಕಂಡುಬಂದಿದೆ. ವಾಹನಗಳ ಓಡಾಟವು ಅಧಿಕವಾಗಿತ್ತು. ಕೊಲ್ಲೂರಿನಲ್ಲಿ ಭಕ್ತಸಾಗರ
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ರವಿವಾರ 30 ಸಾವಿರಕ್ಕೂ ಮಿಕ್ಕಿ ಭಕ್ತರು ಶ್ರೀದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಕಳೆದ 2 ದಿನಗಳಿಂದ ಸುರಿಯುವ ಮಳೆಯ ನಡುವೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತರನ್ನು ನಿಯಂತ್ರಿಸಲು ಸಿಬಂದಿ ಹರಸಾಹಸಪಟ್ಟರು. ಕೊಲ್ಲೂರಿನ ವಸತಿಗೃಹಗಳು ಭರ್ತಿಯಾಗಿದ್ದವು.