Advertisement

Heavy Rain: ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

10:35 AM Jul 07, 2023 | Team Udayavani |

ಬೆಳ್ತಂಗಡಿ: ಐತಿಹಾಸಿಕ ಪ್ರವಾಸಿ ತಾಣವಾಗಿರುವ ನಡ ಗ್ರಾಮದಲ್ಲಿರುವ ಸಾವಿರ ಅಡಿ ಎತ್ತರದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

Advertisement

ವಿಪರೀತ ಮಳೆಯ ಕಾರಣ ಬಂಡೆಯಲ್ಲಿ ನೀರು ಹರಿಯುತ್ತಿರುವುದು ಮತ್ತು ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವ ಹಿನ್ನೆಲೆಯಲ್ಲಿ ಜು. 7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.

ಗಡಾಯಿಕಲ್ಲು ಬಗ್ಗೆ: ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಗಡಾಯಿಕಲ್ಲು ಕೋಟೆಯಿದೆ. ಇದು ಕುದುರೇಮುಖ ಪರ್ವತ ಶ್ರೇಣಿಯ ಒಂದು ಭಾಗ. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದೂ ಕರೆಯುತ್ತಾರೆ.

ಸಮುದ್ರ ಮಟ್ಟದಿಂದ 1,788 ಅಡಿ ಎತ್ತರದಲ್ಲಿರುವ ಗಡಾಯಿಕಲ್ಲು ಬೆಳ್ತಂಗಡಿ ಪಟ್ಟಣದಿಂದ 8 ಕಿಮೀ ದೂರದಲ್ಲಿದೆ. ಗಡಾಯಿಕಲ್ಲಿಗೆ ಹೋಗಬೇಕಾದರೆ ಮಂಗಳೂರಿನಿಂದ ಸುಮಾರು 60 ಕಿ.ಮೀ, ಧರ್ಮಸ್ಥಳದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಬೆಳ್ತಂಗಡಿಗೆ ಮೊದಲು ಬರಬೇಕು. ಅಲ್ಲಿಂದ ಮಂಜೊಟ್ಟಿಗೆ ಬಂದು ಗಡಾಯಿಕಲ್ಲು ಜಾಗ ತಲುಪಬಹುದು.

Advertisement

Udayavani is now on Telegram. Click here to join our channel and stay updated with the latest news.

Next