Advertisement
ಲೋಕಸಭೆ ಚುನಾವಣೆ ನಡುವೆಯೂ ಮೇ ಮತ್ತು ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ತಾಣಗಳಿಗೆ ಭೇಟೆ ನೀಡಿದ್ದಾರೆ. ಎರಡು ತಿಂಗಳಲ್ಲಿ ಬೀಚ್, ದೇವಸ್ಥಾನ ಹಾಗೂ ವಿವಿಧ ಪ್ರವಾಸಿತಾಣಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಜಿಲ್ಲೆಯ ಗುಡುಗು ಸಿಡಿಲು ಸಹಿತ ಗಾಳಿ ಮಳೆಯ ವಾತಾವರಣ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಜಿಲ್ಲಾಡಳಿತದಿಂದ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆಯಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೂ ನಿರ್ಬಂಧ ಹೇರಲಾಗಿದೆ.
Related Articles
Advertisement
ಬಿಸಿಲಿದ್ದರೂ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿಲ್ಲಜಿಲ್ಲೆಯಲ್ಲಿ ಈ ಬಾರಿ ಬೇಸಗೆಯ ತೀವ್ರತೆ ಹೆಚ್ಚಿತ್ತು. ಆದರೂ ಪ್ರವಾಸೋದ್ಯಮ ಸ್ಥಳಗಳ ಮೇಲೆ ಇದು ಯಾವುದೇ ಪರಿಣಾಮ ಬೀರಿಲ್ಲ. ಕಾರಣ, ಕಳೆದ ಬಾರಿ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ಪ್ರವಾಸಿಗರ ಸಂಖ್ಯೆಗಿಂತ ಈ ಬಾರಿ ಬೇಸಗೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆಹೆಚ್ಚಿದೆ. ದೇವಸ್ಥಾನ, ಬೀಚ್ ಹಾಗೂ ವಾಟರ್ ಸ್ಪೋರ್ಟ್ಸ್ ತಾಣಗಳಿಗೆ ಭೇಟಿ ನೀಡಿರುವವರ ಸಂಖ್ಯೆ ಹೆಚ್ಚಿದೆ ಎಂದು ಕುಮಾರ್ ಅವರು ಮಾಹಿತಿ ನೀಡಿದರು.