Advertisement

ಮೇಲ್‌ಗ‌ಂಗೊಳ್ಳಿ: ಅಕ್ರಮಗಳಿಗೆ ಬ್ರೇಕ್‌ ಹಾಕಲು ತಾತ್ಕಾಲಿಕ ಚೆಕ್‌ಪೋಸ್ಟ್‌

12:03 AM Apr 28, 2020 | Sriram |

ಗಂಗೊಳ್ಳಿ: ಲಾಕ್‌ಡೌನ್‌ ಸಮಯದಲ್ಲಿ ವಾಹನ ಮತ್ತು ಜನರ ಸಂಚಾರಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಹಾಗೂ ಅಕ್ರಮ ಗೋ ಸಾಗಾಟ ಮತ್ತು ಅಕ್ರಮ ಮರಳು ಸಾಗಾಟ ಮಟ್ಟ ಹಾಕುವ ದೃಷ್ಟಿಯಿಂದ ಗಂಗೊಳ್ಳಿ ಗ್ರಾಮದ ಮೇಲ್‌ಗ‌ಂಗೊಳ್ಳಿ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಹೊಸ ಚೆಕ್‌ ಪೋಸ್ಟ್‌ ತೆರೆಯಲಾಗಿದೆ.

Advertisement

ಲಾಕ್‌ ಡೌನ್‌ ಸಮಯದಲ್ಲೂ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರು ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿರುವುದು ಮತ್ತು ಆಟೋರಿಕ್ಷಾ ಸಂಚಾರ ಸೇರಿದಂತೆ ದ್ವಿಚಕ್ರ ಹಾಗೂ ಇನ್ನಿತರ ವಾಹನಗಳ ಸಂಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಲಾಕ್‌ ಡೌನ್‌ ಸಮಯದಲ್ಲಿ ಜಾನುವಾರು ಕಳ್ಳತನ ಹಾಗೂ ಅಕ್ರಮ ಗೋಮಾಂಸ ಸಾಗಾಟ ಆರೋಪ ಕೇಳಿ ಬಂದಿತ್ತು. ಅದಲ್ಲದೆ ಅಕ್ರಮ ಮರಳು ಸಾಗಾಟದ ಬಗ್ಗೆ ಸಾಕಷ್ಟು ದೂರು ಕೇಳಿ ಬಂದಿತ್ತು.

ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ನಾಯಕವಾಡಿ ಸಮೀಪ ತೆರೆಯಲಾಗಿದ್ದ ಪೊಲೀಸ್‌ ಚೆಕ್‌ ಪೋಸ್ಟ್‌ನ್ನು ಈಗ ಗಂಗೊಳ್ಳಿಯ ಮೇಲ್‌ಗ‌ಂಗೊಳ್ಳಿಯಲ್ಲಿ ತೆರೆಯಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್‌ ಸಿಬಂದಿ ನಿಯೋಜಿಸಲಾಗಿದ್ದು, ಗಂಗೊಳ್ಳಿಗೆ ಬಂದು ಹೋಗುವ ಎಲ್ಲ ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಸಂಚರಿಸುವ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next