ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ತಂದಿದೆ.
ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಅವರು ತಡೆಯಾಜ್ಞೆ ತಂದಿದ್ದಾರೆ.
ರಾಜ್ಯ ಹೈಕೋರ್ಟ್ ಭೂಸ್ವಾಧೀನವನ್ನು ರದ್ದು ಪಡಿಸಿದ್ದು,ಹಾಲಿ ಸರ್ಕಾರ 2013 ಮೇ ತಿಂಗಳಿನಲ್ಲಿ ಅಧಿಕಾರಕ್ಕೆ ಬಂದಿದ್ದು ಆ ಬಳಿಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸರ್ಕಾರಕ್ಕೆ ನಷ್ಟವಾಗಿದೆ ಎನ್ನುವುದರಲ್ಲಿ ಹುರುಳಿಲ್ಲ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿವುದಾಗಿ ವರದಿಯಾಗಿದೆ.
ಒಂದೇ ದೂರಿನಲ್ಲಿ 2 ಎಫ್‍ಐಆರ್ ದಾಖಲಿಸುವುದು ಕಾನೂನು ಬಾಹಿರ ,ಎಫ್‍ಐಆರ್ ದಾಖಲಿಸುವಲ್ಲಿ ವಿಳಂಬವಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತು ಮಾಡುವ ದಾಖಲೆಗಳಿಲ್ಲ ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿಯಾಗಿದೆ.
ನನ್ನ ಪ್ರಾಮಾಣಿಕತೆಗೆ ಸಂದ ಜಯ
ಪ್ರಾಮಾಣಿಕತೆಗೆ ಸಂದ ಜಯ
ಯಡಿಯೂರಪ್ಪ ಅವರು ಕೋರ್ಟ್ ತೀರ್ಪಿನ ಬಗ್ಗೆ ಬೆಳಗಾವಿಯ ಹುಕ್ಕೇರಿಯಲ್ಲಿ ಪ್ರತಿಕ್ರಿಯೆ ನೀಡಿ ಕೋರ್ಟ್ ತೀರ್ಪು ಪ್ರಾಮಾಣಿಕತೆಗೆ ಸಂದ ಜಯವಾಗಿದೆ. ರಾಜಕೀಯ ದುರುದ್ಧೇಶದಿಂದ ದೂರು ದಾಖಲಿಸಲಾಗಿತ್ತು. ವಿರೋಧಿಗಳಿಗೆ ಮುಖಭಂಗವಾಗಿದೆ. ಎರಡಲ್ಲ ನೂರು ಕೇಸ್ ದಾಖಲಿಸಿದರೂ ಎದುರಿಸುತ್ತೇನೆ ಎಂದು ಗುಡುಗಿದರು.