Advertisement

11ರವರೆಗೆ ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್

07:40 AM Sep 09, 2017 | Team Udayavani |

ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶ ಸೆ.11ರವರೆಗೆ ಹೈಕೋರ್ಟ್‌ ಶುಕ್ರವಾರ ವಿಸ್ತರಿಸಿದೆ.

Advertisement

ಅಕ್ರಮ ಡಿನೋಟಿಫಿಕೇಶನ್‌ ಆರೋಪ ಸಂಬಂಧ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ.ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಮುಂದಿನ ಅರ್ಜಿ ವಿಚಾರಣೆಯವರೆಗೂ ಅರ್ಜಿದಾರರನ್ನು ಬಂಧಿಸಬಾರದು, ಇನ್ನಿತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬಾರದೆಂಬ ಮಧ್ಯಂತರ ಆದೇಶವನ್ನು ವಿಸ್ತರಿಸಿ ಸೆ.11ಕ್ಕೆ ವಿಚಾರಣೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next