Advertisement

ಖಾಸಗಿ ಬಸ್‌ ಮಾಲಿಕರಿಗೆ ತಾತ್ಕಾಲಿಕ ರಿಲೀಫ್

12:28 PM May 04, 2017 | Harsha Rao |

ಬೆಂಗಳೂರು: ರಾಜ್ಯದ ರಾಷ್ಟ್ರೀಕೃತ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ ಹೊಸದಾಗಿ ಪರವಾನಗಿ ನೀಡಲು ನಿರಾಕರಿಸಿ ಸಾರಿಗೆ ಇಲಾಖೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಇದರಿಂದ ಖಾಸಗಿ ಬಸ್‌ ಮಾಲೀಕರಿಗೆ ಬಿಗ್‌ ರಿಲೀಫ್ ದೊರೆತಿದೆ. 2015ರ ಆಗಸ್ಟ್‌ 5ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ರದ್ದುಗೊಳಿಸುವಂತೆ ಕೋರಿ ಎರಡು ಗುಂಪುಗಳಲ್ಲಿ ಸುಮಾರು 1400ಕ್ಕೂ ಅಧಿಕ ಖಾಸಗಿ ಬಸ್‌ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಅರವಿಂದ ಅವರಿದ್ದ
ಏಕಸದಸ್ಯಪೀಠ ಬುಧವಾರ ತೀರ್ಪು ನೀಡಿತು.

Advertisement

ರಾಷ್ಟ್ರೀಕೃತ ಮಾರ್ಗಗಳಲ್ಲಿ ಖಾಸಗಿ ಬಸ್‌ ಸಂಚಾರಕ್ಕೆ ಅವಕಾಶ ಕೋರಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು
ರಾಜ್ಯ ಸರ್ಕಾರ ಅಥವಾ ಕರ್ನಾಟಕ ರಸ್ತೆ ಮೇಲ್ಮನವಿ ಪ್ರಾಧಿಕಾರ ಹೊಸದಾಗಿ ವಿಚಾರಣೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಖಾಸಗಿ ಬಸ್‌ಗಳಿಗೆ ಹೊಸದಾಗಿ ಪರವಾನಿಗೆ ನೀಡುವಂತೆ ಕರ್ನಾಟಕ ರಸ್ತೆ ಸಾರಿಗೆ ಮೇಲ್ಮನವಿ ನ್ಯಾಯಾಧೀಕರಣದ
ಮುಂದೆ ಸಲ್ಲಿಕೆಯಾಗಲಿರುವ ಅರ್ಜಿಗಳನ್ನು ಮೆರಿಟ್‌ ಆಧಾರದ ಮೇಲೆ ವಿಚಾರಣೆ ನಡೆಸಿ 10 ದಿನಗಳಲ್ಲಿ ಆದೇಶ
ಹೊರಡಿಸಬೇಕು ಎಂದು ಸಹ ಹೈಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

ಈ ಅರ್ಜಿಗಳ ವಿಚಾರಣೆಯು ಹೈಕೋರ್ಟ್‌ ಹಾಗೂಸಾರಿಗೆ ನ್ಯಾಯಾಧೀಕರಣದಲ್ಲಿ ಇತ್ಯರ್ಥವಾಗುವ ತನಕ, ಶಾಶ್ವತ
ಪರವಾನಿಗೆ ಅಥವಾ ತಾತ್ಕಾಲಿಕ ಪರವಾನಿಗೆ ಹೊಂದಿರುವ ಖಾಸಗಿ ಬಸ್‌ಗಳು ಸಂಚಾರ ನಡೆಸಬಹುದು ಎಂದು
ಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ನಿಗದಿತ ಮಾರ್ಗಗಳ ಸಂಚಾರಕ್ಕೆ ಪರವಾನಿಗೆ ಹೊಂದಿರುವ ನೂರಾರು
ಖಾಸಗಿ ಬಸ್‌ಗಳು ಕನಿಷ್ಟ ಮೂರು ತಿಂಗಳು ನಿರಾತಂಕವಾಗಿ ಸಂಚರಿಸಲು ಅನುಕೂಲವಾಗಲಿದೆ.

ಏನಿದು ಪ್ರಕರಣ?: 2015ರಲ್ಲಿ ರಾಜ್ಯ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಖಾಸಗಿ ಬಸ್‌ ಮಾಲೀಕ ಅತಾವುಲ್ಲಾ ಖಾನ್‌ ಹಾಗೂ ಮತ್ತಿತರರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಇದರ ಜೊತೆಗೆ ಕೆಲ ಖಾಸಗಿ ಬಸ್‌ ಮಾಲೀಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ನ್ಯಾಯಾಧೀಕರಣದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಸಾರಿಗೆ ಮೇಲ್ಮನವಿ ಪ್ರಾಧಿಕಾರ ಪ್ರಧಾನ ಕಾರ್ಯದರ್ಶಿಯವರ ಆದೇಶ ಪುರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿದ್ದ ಅರ್ಜಿದಾರರೂ ಪುನ: ಹೈಕೋರ್ಟ್‌ ಮೊರೆಹೋಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next