Advertisement

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗ ತಾತ್ಕಾಲಿಕ ಸ್ಥಗಿತ

04:24 PM Jul 20, 2020 | keerthan |

ಮಣಿಪಾಲ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಜುಲೈ 21ರಿಂದ ಜುಲೈ 26ವರೆಗೆ ಎಲ್ಲಾ ಹೊರರೋಗಿ ಸೇವಾ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ.

Advertisement

ಕೆಎಂಸಿ ವೈದ್ಯಕೀಯ ಅಧೀಕ್ಷಕರು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಜುಲೈ 27ರ ನಂತರ ಹೊರರೋಗಿ ವಿಭಾಗವು ಎಂದಿನಂತೆ ಸೇವೆ ಸಲ್ಲಿಸಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಮತ್ತು ಕಳೆದ ಕೆಲವು ದಿನಗಳಿಂದ ನಮ್ಮ ಅನೇಕ ಆರೋಗ್ಯ ಕಾರ್ಯಕರ್ತರು ಕೋವಿಡ್ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಇಡೀ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲಾಗುವುದು ಮತ್ತು 200 ಕೋವಿಡ್ 19 ಹಾಸಿಗೆಯನ್ನು ಸಿದ್ಧಪಡಿಸಲಾಗುತ್ತಿದೆ. ಹೀಗಾಗಿ ಕೆಲವು ದಿನಗಳ ಮಟ್ಟಿಗೆ ಹೊರರೋಗಿ ವಿಭಾಗವನ್ನು ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.

ಜುಲೈ 20ರಿಂದ ವಿಡಿಯೋ ಸಮಾಲೋಚನಾ ಸೌಲಭ್ಯವನ್ನು ಆರಂಭಿಸಿದೆ. ಈ ಸೇವೆಯಡಿಯಲ್ಲಿ ವೈದ್ಯರು ದೂರವಾಣಿ ಮೂಲಕ ಅಥವಾ ವಿಡಿಯೋ ಕರೆ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ 080 47192235 ಸಂಖ್ಯೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗದ ವೈದ್ಯರನ್ನು ವೀಡಿಯೊ ಸಮಾಲೋಚನೆ ಮೂಲಕ ಸಂಪರ್ಕಿಸಬಹುದಾಗಿದೆ. ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next