Advertisement
ಸೆಂಟ್ರಲ್ ಮಾರ್ಕೆಟ್‌ನಲ್ಲಿದ್ದ ಸಗಟು ವ್ಯಾಪಾರಸ್ಥರನ್ನು ಎರಡು ತಿಂಗಳ ಹಿಂದೆ ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಗೊಳಿಸಲಾಗಿತ್ತು. ಚಿಲ್ಲರೆ ವ್ಯಾಪಾರಸ್ಥರಿಗಾಗಿ ಮಂಗಳೂರು ಪುರ ಭವನ ಎದುರು, ಬೀದಿ ಬದಿ ವ್ಯಾಪಾರಿಗಳ ವಲಯ ಮತ್ತು ಲೇಡಿಗೋಶನ್ ಆಸ್ಪತ್ರೆ ಎದುರಿನ ರಸ್ತೆ ಸಮೀಪ 100ಕ್ಕೂ ಹೆಚ್ಚು ಸಿಮೆಂಟ್ ಶೀಟ್‌ನ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗಿತ್ತು.ಸೆಂಟ್ರಲ್ ಮಾರ್ಕೆಟ್‌ನ ಹೊಸ ವಾಣಿಜ್ಯ ಸಂಕೀರ್ಣ ಕಟ್ಟಡ ಮತ್ತು ನೆಹರೂ ಮೈದಾನದ ಬಳಿ ತಾತ್ಕಾಲಿಕ ಕಟ್ಟಡ ನಿರ್ಮಾಣಗೊಳ್ಳುವವರೆಗೆ ವ್ಯಾಪಾರ ನಡೆಸುವುದಕ್ಕಾಗಿ ಈ ಶೆಡ್‌ಗಳನ್ನು ನಿರ್ಮಿಸಿ ಕೊಡಲಾಗಿದೆ. ಆದರೆ ಇದೀಗ ದ್ವಿಚಕ್ರ ವಾಹನಗಳ ಪಾರ್ಕಿಂಗ್‌ಗೆ ಬಳಕೆಯಾಗುತ್ತಿದೆ.
ಲೇಡಿಗೋಶನ್ ಎದುರು ಇರುವ ತಾತ್ಕಾಲಿಕ ಮಳಿಗೆಗಳಲ್ಲಿ ಸೆಂಟ್ರಲ್ ಮಾರ್ಕೆಟ್‌ನಲ್ಲಿದ್ದ ಚಿಲ್ಲರೆ ವ್ಯಾಪಾರಸ್ಥರ ಬದಲು ನಗರದ ಇತರ ಕಡೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದವರು ಬಂದು ವ್ಯಾಪಾರ ಮಾಡುತ್ತಿದ್ದಾರೆ. ಇಂತಹ ವ್ಯಾಪಾರಿಗಳಿಗೆ ಮಳೆಗಾಲಕ್ಕೊಂದು ಸೂರು ಸಿಕ್ಕಂತಾಗಿದೆ. ಶೆಡ್‌ಗಳಲ್ಲಿ ವ್ಯವಸ್ಥೆ ಇಲ್ಲದಿರುವುದರಿಂದ ಅಲ್ಲಿ ತಾತ್ಕಾಲಿಕವಾಗಿಯೂ ವ್ಯಾಪಾರ ಮಾಡಲು ಸಾಧ್ಯವಿಲ್ಲ ಎಂದು ದೂರಿರುವ ಸೆಂಟ್ರಲ್ ಮಾರ್ಕೆಟ್‌ನ ಚಿಲ್ಲರೆ ವ್ಯಾಪಾರಸ್ಥರು ವ್ಯವಹಾರ ಮಾಡಲು ನಿರಾಕರಿಸಿದ್ದಾರೆ.