Advertisement

ಜು.15 ರಿಂದ ಹತ್ತು ದಿನ ಧಾರವಾಡ ಜಿಲ್ಲೆ ಲಾಕ್ ಡೌನ್

05:16 PM Jul 13, 2020 | Team Udayavani |

ಧಾರವಾಡ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದೇ ತಿಂಗಳ 15ರಿಂದ ಹತ್ತು ದಿನ ಧಾರವಾಡ ಜಿಲ್ಲೆ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.

Advertisement

ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ, ಜುಲೈ 24ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಟಿಯಲ್ಲಿ ತಿಳಸಿದ್ದಾರೆ.

ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆಗೆ ವಿನಾಯಿತಿ ನೀಡಲಾಗುವುದು. ಲಾಕ್ ಡೌನ್ ಬಗ್ಗೆ ಅಧಿಕೃತವಾಗಿ ವಿವರ ಆದೇಶ ಹೊರಡಿಸುವರು ಎಂದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಚರ್ಚಿಸಿದ ಬಳಿಕ ನಿರ್ಧಾರಕ್ಕೆ ಬರಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next