Advertisement

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

09:37 PM May 30, 2020 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗ ಸೇರಿ ಹತ್ತು ಲಕ್ಷ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ವಸತಿ ರಹಿತರಿಗೆ ಸೂರು ಒದಗಿಸಬೇಕು ಎಂಬುದು ಪ್ರಧಾನಿ ಮೋದಿ ಆಶಯ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಕಲ್ಪ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಯೋಜನೆ ರೂಪಿಸಿದೆ ಎಂದು ಹೇಳಿದರು.

ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹತ್ತು ಲಕ್ಷ ಮನೆಗಳ ನಿರ್ಮಾಣಕ್ಕೆ 10,000 ಕೋಟಿ ರೂ. ಬೇಕಾಗಲಿದೆ ಎಂದರು.

ಕೊಳೆಗೇರಿ ಮುಕ್ತ ಕರ್ನಾಟಕದ ಗುರಿ
ರಾಜ್ಯದ 2,700 ಕೊಳಚೆ ಪ್ರದೇಶಗಳಲ್ಲಿ ಹಂತ ಹಂತವಾಗಿ ಸುಸಜ್ಜಿತ ವಸತಿ ಬಡಾವಣೆ ನಿರ್ಮಿಸಿ ಕೊಳೆಗೇರಿ ಮುಕ್ತ ಕರ್ನಾಟಕವನ್ನಾಗಿ ಮಾಡುವ ಗುರಿಯಿದೆ. ಈ ನಿಟ್ಟಿನಲ್ಲಿ ಮೊದಲ ಭಾಗವಾಗಿ 757 ಕೊಳೆಗೇರಿಗಳಲ್ಲಿ 1.80 ಲಕ್ಷ ಮನೆಗಳನ್ನು ನಿರ್ಮಿಸಲು ಯೋಜನೆ ಹಾಕಲಾಗಿದೆ ಎಂದು ಹೇಳಿದರು.

ರೇರಾಗೆ ಬಲ
ರಿಯಲ್‌ ಎಸ್ಟೇಟ್‌ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ (ರೇರಾ)ಗೆ ಇನ್ನಷ್ಟು ಶಕ್ತಿ ತುಂಬುವುದಕ್ಕಾಗಿ ಕೆಲವು ನಿಯಮಗಳ ಪರಿಷ್ಕರಣೆ ಅಗತ್ಯವಿದೆ. ಮುಖ್ಯವಾಗಿ ಖರೀದಿದಾರರ ಹಿತರಕ್ಷಣೆ ಹಾಗೂ ವಂಚಿಸಿದವರ ವಿರುದ್ಧ ಕಠಿನ ಕ್ರಮವಹಿಸುವ ಚಿಂತನೆಯಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next