Advertisement

ಬಬಲೇಶ್ವರ ಕ್ಷೇತ್ರದ ಎರಡು ತಾಲೂಕು ಮಿನಿವಿಧಾನಸೌಧ ನಿರ್ಮಾಣಕ್ಕೆ ಟೆಂಡರ್

11:30 AM May 30, 2021 | Team Udayavani |

ವಿಜಯಪುರ : ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ನೂತನ ತಾಲೂಕು ಬಬಲೇಶ್ವರ ಮತ್ತು ತಿಕೋಟಾ ಕೇಂದ್ರ ಸ್ಥಾನಗಳಲ್ಲಿ ಮಿನಿ ವಿಧಾನಸೌಧ ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಮಾಜಿ ಸಚಿವರಾದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಎರಡೂ ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕಛೇರಿಗಳನ್ನು ಒಂದೇ ಸೂರಿನಡಿ ತರುವ ಯೋಜಿಸಲಾಗಿದೆ. ತಲಾ 10 ಕೋಟಿ ರೂ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ : ಬಿಎಸ್ ವೈ ಪೂರ್ಣಾವಧಿ ಸಿಎಂ : ಬದಲಾವಣೆ ಇಲ್ಲ- ಗೋವಿಂದ ಕಾರಜೋಳ

ಬಬಲೇಶ್ವರದಲ್ಲಿ ಅಡವಿಸಂಗಾಪುರ ರಸ್ತೆಯಲ್ಲಿರುವ ಸರ್ಕಾರಿ ಸ್ಥಳದಲ್ಲಿ ಹಾಗೂ ತಿಕೋಟಾದಲ್ಲಿ ಹಳೆ ಪ್ರವಾಸಿ ಮಂದಿರದ ನಿವೇಶನ ಇಲ್ಲಿ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ. ಈಗಾಗಲೇ ಎರಡೂ ಯೋಜನೆಗಳ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಈ ಪ್ರಕ್ರಿಯೆ ಮುಗಿಯುತ್ತಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next