ಹೈದರಾಬಾದ್: ಟೆನಿಸ್ ತಾರೆ ಸಾನಿಯಾ ಮಿರ್ಜಾ ಶೀಘ್ರದಲ್ಲೇ ರಾಜಕೀಯ ಪ್ರವೇಶಿಸುವ ಸಾಧ್ಯತೆಯಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾ ಗಲಿದ್ದು, ಹೈದರಾಬಾದ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
ಆದರೆ ಈ ಬಗ್ಗೆ ಸಾನಿಯಾ ಮಿರ್ಜಾ ಕುಟುಂಬದಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಹೈದರಾಬಾದ್ ಹಾಲಿ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾಸುದ್ದೀನ್ ಒವೈಸಿ ವಿರುದ್ಧ ಸ್ಪರ್ಧೆಗೆ ಬಲಿಷ್ಠ ಅಭ್ಯರ್ಥಿಯ ಹುಡುಕಾಟದಲ್ಲಿ ಕಾಂಗ್ರೆಸ್ ತೊಡಗಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಸಾನಿಯಾ ಮಿರ್ಜಾ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲ ಗಳು ತಿಳಿಸಿವೆ.
ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ 2004ರಿಂದ ಸತತವಾಗಿ ಅಸಾ ಸುದ್ದೀನ್ ಒವೈಸಿ ಜಯಗಳಿಸುತ್ತಾ ಬಂದಿ ದ್ದಾರೆ. ಇದು ಎಐಎಂಐಎಂ ಭದ್ರಕೋಟೆ ಯಾಗಿ ಮಾರ್ಪಟ್ಟಿದೆ. ಮುಸ್ಲಿಂ ಬಾಹುಳ್ಯದ ಈ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನೇ ನಿಲ್ಲಿಸಿ, ಆಡಳಿತ ವಿರೋಧಿ ಅಲೆಯ ಲಾಭ ಪಡೆಯಬೇಕೆಂಬುದು ಕಾಂಗ್ರೆಸ್‌ನ ಲೆಕ್ಕಾಚಾರವಾಗಿದೆ. ಈ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿಯು ಮಾಧವಿ ಲತಾ ಅವರಿಗೆ ಟಿಕೆಟ್ ನೀಡಿದೆ.