ಚಂಡೀಗಢ: ಕಳೆದ ಕೆಲವು ದಿನಗಳಿಂದ ಉದ್ವಿಗ್ನತೆಗೆ ಕಾರಣವಾಗಿದ್ದ ಹರ್ಯಾಣದ ನೂಹ್ ನಲ್ಲಿ ಮತ್ತೆ ಉದ್ವಿಗ್ನತೆ ಪರಿಸ್ಥಿತಿ ನಿರ್ಮಾಣವಾಗಿದೆ.
ಪೂಜೆಗೆ ತೆರಳುತ್ತಿದ್ದ ಮಹಿಳೆಯರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು ಘಟನೆಯಲ್ಲಿ ಎಂಟು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ರಾತ್ರಿ ಮಹಿಳೆಯರು ಪೂಜೆಗೆ ತೆರಳುತ್ತಿದ್ದ ವೇಳೆ ಮಹಿಳೆಯರ ಗುಂಪಿನ ಮೇಲೆ ಮಕ್ಕಳು ಕಲ್ಲು ಎಸೆಯುವ ದೃಶ್ಯಾವಳಿ ಪೊಲೀಸರಿಗೆ ಸಿಕ್ಕಿದೆ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಬಿಜರ್ನಿಯಾ ಹೇಳಿದ್ದಾರೆ.
“ಮಸೀದಿಯಲ್ಲಿ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದು ಕಂಡು ಬಂದಿದ್ದು ಕಲ್ಲು ತೂರಾಟ ನಡೆಸಿದ ಮಕ್ಕಳನ್ನು ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು ಎರಡೂ ಕಡೆಯವರು ಸಮಾಧಾನಪಡಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಸದ್ಯ ಆ ಪ್ರದೇಶದಲ್ಲಿ ಸಂಪೂರ್ಣ ಶಾಂತಿ ನೆಲೆಸಿದೆ ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: TamilNadu: ಟ್ಯಾಂಕರಿಗೆ ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದ ಕಾರು ಡಿಕ್ಕಿ, 5 ಮಂದಿ ಮೃತ್ಯು