Advertisement

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

03:13 AM Nov 26, 2024 | Team Udayavani |

ಢಾಕಾ: ಬಾಂಗ್ಲಾದೇಶದಲ್ಲಿನ ಪ್ರಮುಖ ಹಿಂದೂ ನಾಯಕ, ಇಸ್ಕಾನ್‌ನ ಸಾಧು ಕೃಷ್ಣದಾಸ್‌ ಪ್ರಭು ಅವರನ್ನು ಬಾಂಗ್ಲಾದ ಮಧ್ಯಾಂತರ ಸರಕಾರ ಬಂಧಿಸಿದೆ.
ಇವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದ್ದು, ಢಾಕಾ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೃಷ್ಣದಾಸ್‌ ಅವರು ಬೃಹತ್‌ ಪ್ರತಿಭಟನೆಯನ್ನು ಇತ್ತೀಚೆಗೆ ನಡೆಸಿದ್ದರು. ಈ ವೇಳೆ ಬಾಂಗ್ಲಾದ ಮಧ್ಯಾಂತರ ಸರಕಾರದ ವಿರುದ್ಧ ಮಾತನಾಡಿದ್ದಲ್ಲದೇ ಕೇಸರಿ ಧ್ವಜವನ್ನು ಹಾರಿಸಿದ್ದರು. ಹೀಗಾಗಿ ಕೃಷ್ಣದಾಸ್‌ ಹಾಗೂ ಇತರ 18 ಮಂದಿ ವಿರುದ್ಧ ಬಾಂಗ್ಲಾ ಸರಕಾರ ದೇಶದ್ರೋಹದ ಪ್ರಕರಣ ದಾಖಲಿಸಿತ್ತು.

ಶೇಖ್‌ ಹಸೀನಾ ಪದಚ್ಯುತಿಯ ಬಳಿಕ ಬಾಂಗ್ಲಾದಲ್ಲಿ ಹಿಂಸಾಚಾರ ಹೆಚ್ಚಳವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿ ಹಲವು ದಾಳಿ ನಡೆದಿವೆ. ಕೆಲವು ದಿನಗಳ ಹಿಂದೆ ಇಸ್ಕಾನ್‌ ಸಾಧುಗಳನ್ನು ದೇಶಬಿಟ್ಟು ಓಡಿಸಿ ಇಲ್ಲದಿದ್ದರೆ ಅವರನ್ನೆಲ್ಲ ಹತ್ಯೆ ಮಾಡುತ್ತೇವೆ ಎಂದು ಉಗ್ರ ಸಂಘಟನೆಯೊಂದು ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಸರಕಾರ ಕೃಷ್ಣದಾಸ್‌ರನ್ನು ಬಂಧಿಸಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next