Advertisement
2021ರಿಂದ 2023ರ ವರೆಗೆ ಡಿ.ಎಸ್. ವೀರಯ್ಯ ಅವರು ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದರು. ಆ ವೇಳೆ ಸುಮಾರು 47 ಕೋಟಿ ರೂ. ಮೌಲ್ಯದ ಹಗರಣ ನಡೆದಿತ್ತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಸಾದ್ ಅವರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ವೀರಯ್ಯ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.ಇದಾದ ಬಳಿಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರವು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹಿಸಿದ್ದರು. ಇದೇ ಪ್ರಕರಣದಲ್ಲಿ ಈ ಹಿಂದೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಂಕರಪ್ಪ ಬಂಧನವಾಗಿತ್ತು. ಸದ್ಯ ಅವರು ಜೈಲಿನಲ್ಲಿದ್ದಾರೆ.
ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ 194ನೇ ನಿರ್ದೇಶಕ ಮಂಡಳಿ ಸಭೆಯು 2021ರ ಅಕ್ಟೋಬರ್‌ನಲ್ಲಿ ನಡೆದಿತ್ತು. ಈ ವೇಳೆ ಟ್ರಕ್ ಟರ್ಮಿನಲ್‌ಗಳ ನಿರ್ವಹಣೆಗೆ 10 ಕೋಟಿ ರೂ. ಮೊತ್ತದ ತುಂಡು ಗುತ್ತಿಗೆ ನೀಡಲು ಅನುಮೋದನೆ ಹೊರಡಿಸಲಾಗಿತ್ತು. ಬಳಿಕ ಕಾಮಗಾರಿ ನಡೆಸದೆ ಬರೋಬ್ಬರಿ 47 ಕೋಟಿ ರೂ. ಅಕ್ರಮ ನಡೆಸಿದ ಆರೋಪ ಕೇಳಿ ಬಂದಿತ್ತು.