Advertisement

ಹುಣಸೂರು: ಮದುವೆ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ; ಒಂದೇ ಕುಟುಂಬದ 6 ಮಂದಿ ಸಾವು

06:02 PM Apr 20, 2022 | Team Udayavani |

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ  ತಾಲೂಕಿನ ಹರೀನಹಳ್ಳಿಗೇಟ್ ಬಳಿ ನಡೆದಿದೆ.

Advertisement

ಮೃತರೆಲ್ಲರೂ ಕೊಡಗಿನ ಪಾಲಿ ಬೆಟ್ಟದ ಒಂದೆ ಕುಟುಂಬದ ಸದಸ್ಯರೆಂದು ತಿಳಿದು ಬಂದಿದೆ.

ಹುಣಸೂರಿನಲ್ಲಿ ನಡೆದ ಸಂಬಂಧಿಕರ ಮದುವೆ ಕಾರ್ಯದಲ್ಲಿ ಭಾಗವಹಿಸಿ ಪಾಲಿ ಬೆಟ್ಟಕ್ಕೆ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ.

ಪರಿಣಾಮ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಅಪಘಾತದ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ರವಿಪ್ರಸಾದ್ ಹಾಗೂ ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವಗಳನ್ನು ಹುಣಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next