Advertisement

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮೂವರ ದುರ್ಮರಣ

03:45 AM Mar 23, 2019 | |

ಸಾಗರ: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐಗಿನಬೈಲು ಎಂಬಲ್ಲಿ ಶನಿವಾರ ಮುಂಜಾನೆ ನಡೆದಿದೆ. 

Advertisement

ಮೃತರನ್ನು ಲಾರಿ ಚಾಲಕ ಕುಶಾಲನಗರ ನಿವಾಸಿ ಸಚಿನ್,ಕ್ಲೀನರ್ ತಾಳಿಕೋಟೆ ತಾಲೂಕಿನ ಮಲಕಪ್ಪ ಮತ್ತು ಟ್ಯಾಂಕರ್ ಚಾಲಕ ಲೋಕೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಎಂಬವರು ಗಂಭೀರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. 

ಮುಂಜಾನೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿಯಾದ ವೇಗ ಮತ್ತು ನಿದ್ದೆಯ ಮಂಪರು ಅಪಾಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. 


ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next