ಚಿತ್ರದುರ್ಗ: ಹೊರವಲಯದ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾತ್ರಿ ಹತ್ತು ಗಂಟೆ ಸುಮಾರಿಗೆ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ದಾವಣಗೆರೆ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿವೈಡರ್ ಹತ್ತಿ ಬೆಂಗಳೂರು ಮಾರ್ಗಕ್ಕೆ ತಿರುಗಿ, ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ ಎನ್ನಲಾಗಿದೆ.ಗಾಯಾಳುಗಳನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.